ಬ್ರಿಟನ್ ಚುನಾವಣೆಯಲ್ಲಿ ಸೋಲೊಪ್ಪಿಕೊಂಡ ಸುಧಾಮೂರ್ತಿ ಅಳಿಯ ರಿಷಿ ಸುನಕ್
ಲೇಬರ್ ಪಕ್ಷ 300 ಕ್ಕೂ ಹೆಚ್ಚು ಸ್ಥಾನ ಗಳಿಸಿ ಬ್ರಿಟನ್ ನಲ್ಲಿ ಅಧಿಕಾರದತ್ತ ಹೆಜ್ಜೆಯಿಟ್ಟಿದೆ. ಮತಗಟ್ಟೆ ಸಮೀಕ್ಷೆಗಳ ಪ್ರಕಾರ ರಿಷಿ ಸುನಕ್ ಗೆ ಹೀನಾಯ ಸೋಲಾಗಲಿದೆ. ಲೇಬರ್ ಪಕ್ಷದ ಕೀರ್ ಸ್ಟಾರ್ಮರ್ ಮುಂದಿನ ಪ್ರಧಾನಿಯಾಗುವ ಎಲ್ಲಾ ಲಕ್ಷಣಗಳಿವೆ.
ಒಟ್ಟು 650 ಸ್ಥಾನಗಳ ಪೈಕಿ 410 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷ ಬಹುಮತ ಸಾಧಿಸುವ ನಿರೀಕ್ಷೆಯಿದೆ. ಸದ್ಯದ ಎಕ್ಸಿಟ್ ಪೋಲ್ ಸಮೀಕ್ಷೆಗಳ ಪ್ರಕಾರ 14 ವರ್ಷಗಳ ಕನ್ಸರ್ವೇಟಿವ್ ಪಕ್ಷದ ಅಧಿಕಾರ ಈ ಬಾರಿ ಕೊನೆಗೊಳ್ಳಲಿದೆ.
ಪಕ್ಷದ ಒಳಜಗಳವೇ ರಿಷಿ ಸುನಕ್ ಪಕ್ಷದ ಸೋಲಿಗೆ ಕಾರಣ ಎನ್ನಲಾಗುತ್ತಿದೆ. ಗುರುವಾರವಷ್ಟೇ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ರಿಷಿ ಸುನಕ್ ಮತಗಟ್ಟೆಗೆ ಬಂದು ಮತದಾನ ಮಾಡಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಇದೇ ಮೊದಲ ಬಾರಿಗೆ ಬ್ರಿಟನ್ ನಲ್ಲಿ ಭಾರತೀಯ ಮೂಲದವರೊಬ್ಬರು ಪ್ರಧಾನಿಯಾಗಿದ್ದರು.