ಪರೀಕ್ಷೆಯಲ್ಲಿ ಸಮಯ ನಿರಾಕರಿಸಿದ್ದಕ್ಕೆ ಶಾಲೆಯನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು!

ಭಾನುವಾರ, 26 ಫೆಬ್ರವರಿ 2023 (12:22 IST)
ಇಂಫಾಲ : ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಚ್ಚುವರಿ ಸಮಯ ಕೇಳಿದ್ದು, ಇದನ್ನು ನಿರಾಕರಿಸಿದ್ದಕ್ಕೆ ಶಾಲೆಯ ಕಟ್ಟಡವನ್ನೇ ಧ್ವಂಸಗೊಳಿಸಿರುವ ಘಟನೆ ಮಣಿಪುರದ ತೌಬಲ್ ಜಿಲ್ಲೆಯಲ್ಲಿ ನಡೆದಿದೆ.
 
ಘಟನೆ ಯೈರಿಪೋಕ್ನ ಎಸಿಎಂಇ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ ನಡೆಸುತ್ತಿದ್ದ ಪರೀಕ್ಷೆ ವೇಳೆ 5 ನಿಮಿಷ ಬಾಕಿ ಉಳಿದಿದ್ದಾಗ ವಿದ್ಯಾರ್ಥಿಗಳು ಹೆಚ್ಚುವರಿ ಸಮಯ ನೀಡುವಂತೆ ಒತ್ತಾಯಿಸಿದ್ದಾರೆ.

ಶಾಲೆಯ ಗಂಟೆ ಬಾರಿಸುತ್ತಿದ್ದಂತೆ ವಿದ್ಯಾರ್ಥಿಗಳು ಗಲಾಟೆ ಮಾಡಲು ಪ್ರಾರಂಭಿಸಿದ್ದಾರೆ. ಗಲಾಟೆ ಹಿಂಸಾಚಾರಕ್ಕೆ ತಿರುಗಿ, ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ