ಇರಾನ್ ಸಂಸತ್ ಭವನದ ಮೇಲೆ ಆತ್ಮಾಹುತಿ ಉಗ್ರರ ದಾಳಿ

ಬುಧವಾರ, 7 ಜೂನ್ 2017 (13:12 IST)
ಇರಾನ್ ಸಂಸತ್ ಭವನದೊಳಗೆ ಪ್ರವೇಶಿಸಿದ ನಾಲ್ವರು ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿ ಹೇಯ ಕೃತ್ಯ ಎಸಗಿದ್ದಾರೆ. ಉಗ್ರರ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹತ್ಯೆಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
 
ಸಂಸತ್‌ನಲ್ಲಿ ಕಲಾಪ ನಡೆಯುತ್ತಿರುವಂತೆ ಸಂಸತ್ ಕಟ್ಟಡದೊಳಗೆ ನುಗ್ಗಿದ ಆತ್ಮಾಹುತಿ ದಳದ ಉಗ್ರರು, ಕೆಲವರನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ ಎನ್ನಲಾಗಿದೆ. ಉಗ್ರರಿರುವ ಸ್ಥಳವನ್ನು ಭದ್ರತಾ ಪಡೆಗಳು ಸುತ್ತುವರಿದಿದೆ ಎಂದು ಮೂಲಗಳು ತಿಳಿಸಿವೆ. 
 
ಇರಾನ್ ಪರಮೋಚ್ಚ ನಾಯಕ ಆಯುತುಲ್ಲಾ ಖೋಮೇನಿ ಸಮಾಧಿ ಬಳಿ ಉಗ್ರನೊಬ್ಬ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ.
 
ಆಯುತುಲ್ಲಾ ಖೋಮೇನಿ ಮೆಟ್ರೋ ರೈಲು ನಿಲ್ದಾಣದ ಮೇಲೆ ಆತ್ಮಾಹುತಿ ದಳದ ಉಗ್ರನೊಬ್ಬ ತನ್ನನ್ನು ತಾನೇ ಸ್ಫೋಟಿಸಿಕೊಂಡಾಗ ಸ್ಥಳದಲ್ಲಿದ್ದ ಕೆಲ ನಾಗರಿಕರು ಗಾಯಗೊಂಡಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
 
ಉಗ್ರರ ದಾಳಿಯಲ್ಲಿ ಕನಿಷ್ಠ ಐವರು ನಾಗರಿಕರು ಹತ್ಯೆಯಾಗಿದ್ದು ಓರ್ವ ಭದ್ರತಾ ಪಡೆಯ ಯೋಧನೊಬ್ಬ ಹತ್ಯೆಯಾಗಿದ್ದಾನೆ. ಇನ್ನೂ ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾ ಪಡೆಗಳು ತಿಳಿಸಿವೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ