ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯಾವುದೇ ತಾರತಮ್ಯ ಇಲ್ಲದೆ ಕ್ರಮ ಕೈಗೊಳ್ಳಬೇಕು- ಮೈಕ್ ಪಾಂಪಿ ಯೊ

ಶುಕ್ರವಾರ, 8 ಜೂನ್ 2018 (15:30 IST)
ವಾಷಿಂಗ್ಟನ್ : ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿ ಯೊ ಅವರು ಪಾಕಿಸ್ತಾನದ ಸೇನೆ ಮುಖ್ಯಸ್ಥ ಖಮರ್ ಜಾವೇದ್ ಬಜ್ವಾ ಅವರ ಜೊತೆ ಮಾತುಕತೆ ನಡೆಸಿ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಯಾವುದೇ ತಾರತಮ್ಯ ಇಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.


ಮೈಕ್ ಪಾಂಪಿ ಯೊ ಅವರು ಬಜ್ವಾ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಈ ಬಗ್ಗೆ ಹೇಳಿರುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ಹೀಥರ್ ನಯ್ಯೂರ್ಟ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ಹಾಗೆ ದಕ್ಷಿಣ ಏಷ್ಯಾದಲ್ಲಿನ ಎಲ್ಲಾ ಭಯೋತ್ಪಾದಕ ಸಂಘಟನೆಗಳನ್ನು ಗುರಿಯಾಗಿಸಿ ಕಾರ್ಯಾಚರಣೆ ನಡೆಸಬೇಕಿರುವ ಪ್ರಾಮುಖ್ಯತೆ, ಪಾಕಿಸ್ತಾನ-ಅಮೆರಿಕ ದ್ವಿಪಕ್ಷೀಯ ಬಾಂಧವ್ಯ ಸುಧಾರಿಸುವ ಕುರಿತು ಚರ್ಚಿಸಲಾಯಿತು' ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ