ಆಫ್ಘಾನ್ ಪ್ರತಿಭಟನಾಕಾರರ ಮೇಲೆ ತಾಲಿಬಾನ್ ಉಗ್ರರಿಂದ ಗುಂಡಿನ ದಾಳಿ

ಬುಧವಾರ, 18 ಆಗಸ್ಟ್ 2021 (15:15 IST)
ಆಫ್ಘಾನಿಸ್ತಾನ ಧ್ವಜ ಮೇಲೆ ಹಾರಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ತಾಲಿಬಾನ್ ಉಗ್ರರು ಗುಂಡಿನ ದಾಳಿ ನಡೆಸಿದ ಆಘಾತಕಾರಿ ಘಟನೆ ನಡೆದಿದೆ.
ಕೆಲವು ದಿನಗಳ ಹಿಂದೆಯಷ್ಟೇ ಆಫ್ಘಾನಿಸ್ತಾನದ ಮೇಲೆ ತಾಲಿಬಾನ್ ಉಗ್ರ ಸಂಘಟನೆ ಪ್ರಭುತ್ವ ಸಾಧಿಸಿದ್ದು, ಹಲವಾರು ಜನರು ಜೀವ ಭಯದಿಂದ ದೇಶ ಬಿಟ್ಟು ಓಡಿ ಹೋಗುತ್ತಿದ್ದಾರೆ. ಇದರ ನಡುವೆ ಕೆಲವು ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಜಲಲಾಬಾದ್ ನಲ್ಲಿ ಆಫ್ಘಾನಿಸ್ತಾನದ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜಕ್ಕಿಂತ ಮೇಲೆ ಹಾರಾಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ತಾಲಿಬಾನ್ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಸಾವು-ನೋವಿನ ವರದಿ ಬಂದಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ