ವಲಸಿಗರ ಕೇಂದ್ರದಲ್ಲಿ ಭೀಕರ ಅಗ್ನಿ ದುರಂತ : 39 ಮಂದಿ ಸಾವು!

ಬುಧವಾರ, 29 ಮಾರ್ಚ್ 2023 (11:43 IST)
ವಾಷಿಂಗ್ಟನ್ : ಉತ್ತರ ಮೆಕ್ಸಿಕೋದ ಸಿಯುಡಾಡ್ ಜುವಾರೆಜ್ನಲ್ಲಿರುವ ಸರ್ಕಾರಿ ವಲಸಿಗರ ಕೇಂದ್ರದಲ್ಲಿ ಸೋಮವಾರ ರಾತ್ರಿ ಭೀಕರ ಅಗ್ನಿ ದುರಂತ ಸಂಭವಿಸಿದೆ. ಘಟನೆಯಲ್ಲಿ 39 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ.
 
ಮೆಕ್ಸಿಕೋ ಮತ್ತು ಅಮೆರಿಕ ಸಂಪರ್ಕಿಸುವ ಸ್ಟಾಂಟನ್-ಲೆಡ್ರೆ ಸೇತುವೆಯ ಬಳಿ ಇರುವ ನ್ಯಾಷನಲ್ ಇನ್ಸ್ಟಿಟ್ಯೂಟ್ ಫಾರ್ ಮೈಗ್ರೇಷನ್ ಕಚೇರಿಯಲ್ಲಿ ರಾತ್ರಿ 10 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಘಟನೆಗೂ ಮುನ್ನ ನಗರದಿಂದ 71 ವಲಸಿಗರನ್ನು ಕೇಂದ್ರಕ್ಕೆ ಕರೆತರಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಸದ್ಯ ಘಟನೆಯ ದೃಶ್ಯಾವಳಿಗಳು ಜಾಲತಾಣದಲ್ಲಿ ಹರಿದಾಡುತ್ತಿವೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಅಂಬುಲೆನ್ಸ್ ಹಾಗೂ ತುರ್ತು ಸೇವೆಗಳ ಸೌಲಭ್ಯ ಕಲ್ಪಿಸಲಾಗಿದ್ದು, ಗಾಯಗೊಂಡವರನ್ನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ