ಎರಡೂ ಡೋಸ್ ಪಡೆದ ಪ್ರಯಾಣಿಕರಿಗೆ ಪರೀಕ್ಷೆ ಕಡ್ಡಾಯವಿಲ್ಲ
ಸೋಂಕು ಪ್ರಕರಣಗಳ ಸಂಖ್ಯೆ ಇಳಿಯುತ್ತಿದೆ. ಹೀಗಾಗಿ ಬೇರೆ ದೇಶಗಳಿಂದ ಬರುವವರಿಗೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು. ಈ ವಿನಾಯಿತಿ ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದವರಿಗೆ ಮಾತ್ರ ಅನ್ವಯವಾಗಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇಂಗ್ಲೆಂಡ್ ವ್ಯಾಪಾರ ಹಾಗೂ ಪ್ರಯಾಣಿಕರಿಗೆ ಮುಕ್ತವಾಗಿದೆ. ಆದ್ದರಿಂದ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸಲು ಸರ್ಕಾರ ನಿರ್ಧರಿಸಿದೆ. ಲಸಿಕೆ ಎರಡೂ ಡೋಸ್ ಪಡೆದವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ ಎಂದು ಹೇಳಿದ್ದಾರೆ.
ನಿರ್ಬಂಧ ಸಡಿಲಿಕೆ ದಿನಾಂಕವನ್ನು ಇನ್ನೂ ಸ್ಪಷ್ಟಪಡಿಸಿಲ್ಲ. ಆದರೆ ಕೋವಿಡ್ ಲಸಿಕೆಯನ್ನು ಸಂಪೂರ್ಣವಾಗಿ ಪಡೆದವರಿಗೆ ಯಾವುದೇ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ.