ಉಕ್ರೇನ್ ವಿರುದ್ಧದ ದಾಳಿ ಜೀವಹಾನಿಗೆ ಕಾರಣವಾಗಬಹುದು : ಬೈಡೆನ್

ಗುರುವಾರ, 24 ಫೆಬ್ರವರಿ 2022 (10:42 IST)
ವಾಷಿಂಗ್ಟನ್ : ಉಕ್ರೇನ್ ವಿರುದ್ಧದ ದಾಳಿಗೆ ಜಗತ್ತು ರಷ್ಯಾವನ್ನು ಹೊಣೆಗಾರರನ್ನಾಗಿ ಮಾಡುತ್ತದೆ.

ಇದು ವಿಪತ್ಕಾರಕ ಜೀವಹಾನಿಗೆ ಕಾರಣವಾಗಬಹುದು ಎಂದು ಯುಎಸ್ ಅಧ್ಯಕ್ಷ ಜೋ ಬೈಡೆನ್ ಹೇಳಿದ್ದಾರೆ.

ರಷ್ಯಾ ಮತ್ತು ಉಕ್ರೇನ್ ನಡುವಿನ ಬಿಕ್ಕಟ್ಟು ಜಟಿಲಗೊಂಡಿದ್ದು, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿಲ್, ಉಕ್ರೇನ್ ಮೇಲೆ ಯುದ್ಧವನ್ನು ಘೋಷಿಸುತ್ತಿದ್ದಂತೆ ಗುರುವಾರ ಮಾತನಾಡಿದ ಜೋ ಬೈಡೆನ್ ಅವರು, ಉಕ್ರೇನ್ ವಿರುದ್ಧದ ದಾಳಿ ರಷ್ಯಾದ ಮೇಲೆ ಪರಿಣಾಮ ಬೀರುತ್ತದೆ. ಇದು ಪ್ರಚೋದಿತ ಮತ್ತು ನ್ಯಾಯ ಸಮ್ಮತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗುರುವಾರ ಬೆಳಗ್ಗೆ 9:00 ಗಂಟೆಗೆ ಬ್ರಿಟನ್, ಕೆನಡಾ, ಫ್ರಾನ್ಸ್, ಜರ್ಮನಿ, ಇಟಲಿ, ಜಪಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಾಯಕರೊಂದಿಗೆ ವರ್ಚುವಲ್ ಸಭೆ ನಡೆಸಬೇಕಾಗಿತ್ತು. ಆದರೆ ಸಾರ್ವಜನಿಕರ ಟೀಕೆಗಳಿಂದ ವಾಷಿಂಗ್ಟನ್ನ ಶ್ವೇತಭವನದಲ್ಲಿ ಮಧ್ಯಾಹ್ನ ಸಭೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ