ಪ್ರಚಾರದ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಭ್ಯರ್ಥಿ

ಸೋಮವಾರ, 25 ಮಾರ್ಚ್ 2019 (12:03 IST)
ಕಾಶ್ಮೀರ : ಚುನಾವಣಾ ಪ್ರಚಾರದ ವೇಳೆ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಭ್ಯರ್ಥಿ ಪಾಕಿಸ್ತಾನದ ಪರ ಘೋಷಣೆ ಕೂಗಿ ಇದೀಗ ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.


ಉತ್ತರ ಕಾಶ್ಮೀರದ ಬಾರಮುಲ್ಲಾ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಭ್ಯರ್ಥಿ ಮೊಹಮ್ಮದ್ ಅಕ್ಬರ್ ಲೋನೆ, ಕುಪ್ವಾರಾದಲ್ಲಿ ನಡೆದ ತನ್ನ ಚುನಾವಣಾ ಪ್ರಚಾರ ಭಾಷಣದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದಿದ್ದಾರೆ.
ಈ ಹಿಂದೆಯೂ ಕೂಡ ಮೊಹಮ್ಮದ್ ಅಕ್ಬರ್ ಲೋನೆ, ಜಮ್ಮು-ಕಾಶ್ಮೀರದ ವಿಧಾನಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿ ವಿವಾದಕ್ಕೆ ಸಿಲುಕಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ