ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆ!

ಗುರುವಾರ, 19 ಮೇ 2022 (12:32 IST)
ವಾಷಿಂಗ್ಟನ್ : ಅಮೆರಿಕದಲ್ಲಿ ಮೊದಲ ಮಂಕಿಪಾಕ್ಸ್ ಪ್ರಕರಣ ಪತ್ತೆಯಾಗಿದೆ.

ಮೇ ತಿಂಗಳ ಆರಂಭದಿಂದಲೇ ಹಲವಾರು ಮಂದಿಯಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದೆ ಎಂದು ಉತ್ತರ ಅಮೆರಿಕ ಮತ್ತು ಯುರೋಪ್ನ ಆರೋಗ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಆಫ್ರಿಕಾದ ಕೆಲವು ಭಾಗಗಳಲ್ಲಿ ವಾಸಿಸುವ ಸ್ಥಳೀಯರಿಂದ ಮಂಕಿಪಾಕ್ಸ್ ವೈರಸ್ ಹರಡುತ್ತಿದ್ದು, ಎಲ್ಲಡೆ ಆತಂಕ ಸೃಷ್ಟಿಸಿದೆ. ಇತ್ತೀಚೆಗಷ್ಟೇ ಸ್ಪೇನ್ ಮತ್ತು  ಪೋರ್ಚುಗಲ್ನ 40ಕ್ಕೂ ಹೆಚ್ಚು ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸುಮಾರು 12ಕ್ಕೂ ಹೆಚ್ಚು ಜನರಲ್ಲಿ ಮಂಕಿಪಾಕ್ಸ್ ವೈರಸ್ ಕಾಣಿಸಿಕೊಂಡಿದೆ ಎಂದು ಕೆನಡಾ ತಿಳಿಸಿದೆ. 

ಮೇ 6 ರಿಂದ ಬ್ರಿಟನ್ನಲ್ಲಿ ಒಂಬತ್ತು ಪ್ರಕರಣಗಳು ಪತ್ತೆಯಾಗಿದ್ದು, ಬುಧವಾರ ಅಮೇರಿಕದಲ್ಲಿ ಮೊದಲ ಪ್ರಕರಣ ಕಂಡುಬಂದಿದೆ. ಪೂರ್ವ ರಾಜ್ಯವಾದ ಮ್ಯಾಸಚೂಸೆಟ್ಸ್ನ ವ್ಯಕ್ತಿಯೊಬ್ಬರು ಕೆನಾಡಕ್ಕೆ ಭೇಟಿ ನೀಡಿದ ಬಳಿಕ ವೈರಸ್ ದೃಢಪಟ್ಟಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ