ಇಸ್ಲಾಮಾಬಾದ್ : ಪಾಕಿಸ್ತಾನ ಸಂಸತ್ನಲ್ಲಿ ವಿಶ್ವಾಸಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್,
ಇಂದಿನಿಂದ ಪಾಕಿಸ್ತಾನದಲ್ಲಿ ಮತ್ತೆ ಸ್ವಾತಂತ್ರ್ಯ ಹೋರಾಟ ಪ್ರಾರಂಭವಾಗಿದೆ ಎಂದು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.
ಅಧಿಕಾರ ಕಳೆದುಕೊಂಡ ಬಳಿಕ ಟ್ವಿಟ್ಟರ್ನಲ್ಲಿ ಟ್ವೀಟ್ ಮಾಡಿರುವ ಇಮ್ರಾನ್ ಖಾನ್, 1947ರಲ್ಲಿ ಪಾಕಿಸ್ತಾನ ಸ್ವತಂತ್ರ ರಾಷ್ಟ್ರವಾಯಿತು. ಆದರೆ ಆಡಳಿತ ಬದಲಾವಣೆಯ ವಿದೇಶಿ ಷಡ್ಯಂತ್ರದ ವಿರುದ್ಧ ಸ್ವಾತಂತ್ರ್ಯ ಹೋರಾಟ ಇಂದು ಮತ್ತೆ ಪ್ರಾರಂಭವಾಗುತ್ತಿದೆ.
ದೇಶದ ಜನರು ಯಾವಾಗಲೂ ತಮ್ಮ ಸಾರ್ವಭೌಮತ್ವ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುತ್ತಾರೆ ಎಂದಿದ್ದಾರೆ.
ಪಾಕಿಸ್ತಾನ ಸಂಸತ್ನಲ್ಲಿ ತಡರಾತ್ರಿ ವಿಶ್ವಾಸ ಮತಯಾಚಣೆ ನಡೆಯಿತು. ಇಮ್ರಾನ್ ಖಾನ್ ನೇತೃತ್ವದ ಆಡಳಿತಾರೂಢ ಪಕ್ಷ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ವಿಶ್ವಾಸ ಮತಯಾಚನೆಯಲ್ಲಿ ಸೋತು ಅಧಿಕಾರ ಕಳೆದುಕೊಳ್ಳಬೇಕಾಯಿತು. ನಾಳೆ ರಾಷ್ಟ್ರೀಯ ಅಸೆಂಬ್ಲಿಗೆ ಪಿಟಿಐ ರಾಜೀನಾಮೆ ನೀಡಲಿದೆ.