ಪಾಕಿಸ್ಥಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್ ಗೆ ಸಿಹಿ ಸುದ್ದಿ ನೀಡಿದ ಹೈಕೋರ್ಟ್‌

ಗುರುವಾರ, 20 ಸೆಪ್ಟಂಬರ್ 2018 (12:50 IST)
ಇಸ್ಮಾಮಾಬಾದ್ : ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್, ಪುತ್ರಿ ಮರ್ಯಮ್‌ ಅವರಿಗೆ ವಿಧಿಸಿದ ಜೈಲು ಶಿಕ್ಷೆಯನ್ನು ರದ್ದುಗೊಳಿಸುವಂತೆ ಇಸ್ಲಾಮಾಬಾದ್‌ ಹೈಕೋರ್ಟ್‌ ಆದೇಶಿಸಿದೆ.


ಅವೆನಿಫೀಲ್ಡ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯ ಪ್ರಧಾನಿ ನವಾಜ್ ಷರೀಫ್​ಗೆ 10 ವರ್ಷ ಜೈಲು ಶಿಕ್ಷೆ ಹಾಗೂ  ಮಗಳಿಗೆ ಕೋರ್ಟ್ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಶರೀಫ್ ಕುಟುಂಬ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.


ಇದರ ವಿಚಾರಣೆ ನಡೆಸಿದ ಹೈಕೋರ್ಟ್ ನವಾಜ್ ಶರೀಫ್ ಹಾಗೂ ಪುತ್ರಿ ಮರ್ಯಮ್‌ ಅವರಿಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಗೊಳಿಸಿ ತಲಾ 5 ಲಕ್ಷ ರೂ. ಬಾಂಡ್‌ ಆಧಾರದ ಮೇರೆಗೆ ಅವರನ್ನು ಬಿಡುಗಡೆ ಮಾಡುವಂತೆ ಆದೇಶಿಸಿದೆ. ಇದರಿಂದ  ನವಾಜ್ ಶರೀಫ್ ಬಿಗ್ ರಿಲೀಫ್ ಸಿಕ್ಕಂತಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ