ವಾಷಿಂಗ್ಟನ್ : ಅಮೇರಿಕಾದ ದಂಪತಿಯೊಬ್ಬರಿಗೆ ತಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.
ಇದಾದ 48 ಗಂಟೆಗಳಲ್ಲಿಯೇ ಮಹಿಳೆ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ. 23 ವರ್ಷದ ಪೇಟನ್ ಸ್ಟೋವರ್ ಅವರು ಒಮಾಹಾದಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮೊದಲಿಗೆ ಕೆಲಸದ ಒತ್ತಡದಿಂದ ಯಾವಾಗಲೂ ಆಯಾಸವಾಗುತ್ತದೆ ಎಂದು ಭಾವಿಸಿದ್ದರು.
ಆದರೆ ದೇಹದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಲು ಪ್ರಾರಂಭಿಸಿದಾಗ, ಅವರ ಕಾಲುಗಳಲ್ಲಿ ಊತವುಂಟಾಗುತ್ತಿದ್ದರಿಂದ ವೈದ್ಯರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ವೈದ್ಯರು ನೀವು ಗರ್ಭಿಣಿಯಾಗಿದ್ದೀರಾ ಎಂದು ತಿಳಿಸಿದ್ದಾರೆ.
ಇದರಿಂದ ಅನುಮಾನಗೊಂಡ ಮಹಿಳೆಯ ಪತಿ, ಮತ್ತೊಮ್ಮೆ ಟೆಸ್ಟ್ ಮಾಡಿಸಿಕೊಂಡಗಲೂ ಗರ್ಭಿಣಿಯಾಗಿರುವುದು ದೃಢವಾಗಿದೆ. ಅಲ್ಲದೇ ಸ್ಕ್ಯಾನಿಂಗ್ ವೇಳೆ ಹೊಟ್ಟೆಯಲ್ಲಿ ಮಗು ಇರುವುದನ್ನು ನೋಡಿರುವುದಾಗಿ ಹೇಳಿದ್ದಾರೆ.
ಪೇಟನ್ ಸ್ಟೋವರ್ ತನ್ನ ಮೂತ್ರಪಿಂಡಗಳು ಮತ್ತು ಯಕೃತ್ (ಲಿವರ್) ಸರಿಯಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದೆ ಎಂದು ಹೇಳಿದಾಗ ವೈದ್ಯರು ತಮ್ಮನ್ನು ಭೇಟಿಯಾಗುವಂತೆ ತಿಳಿಸಿದ್ದರು. ಆದರೆ ಗರ್ಭಿಣಿಯಾಗಿರುವ ಬಗ್ಗೆ ಮಾಹಿತಿ ನೀಡಿದ ಅದೇ ರಾತ್ರಿ ಮಹಿಳೆ ಮಗುವಿಗೆ ಜನ್ಮ ನೀಡಿರುವುದಾಗಿ ವೈದ್ಯರು ಹೇಳಿದ್ದಾರೆ.