ಕೊವೀಡ್ ಲಸಿಕೆ ಸಂಶೋಧಿಸಿದ್ದ ವಿಜ್ಞಾನಿಯ ಹತ್ಯೆ

ಭಾನುವಾರ, 5 ಮಾರ್ಚ್ 2023 (11:57 IST)
ಮಾಸ್ಕೋ : ರಷ್ಯಾದ ಕೋವಿಡ್-19 ಲಸಿಕೆ ಸ್ಪುಟ್ನಿಕ್ ವಿ ಅಭಿವೃದ್ಧಿಪಡಿಸಲು ಸಹಕರಿಸಿದ ವಿಜ್ಞಾನಿ ಆಂಡ್ರೆ ಬೊಟಿಕೋವ್ ಅವರನ್ನ ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ.
 
ಮಾಸ್ಕೋದ ಅಪಾರ್ಟ್ಮೆಂಟ್ನಲ್ಲಿ ಅವರನ್ನ ಬೆಲ್ಟ್ನಿಂದ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ರಷ್ಯಾದ ಮಾಧ್ಯಮ ವರದಿ ಮಾಡಿದೆ.

ಬೊಟಿಕೋವ್ (47) ಗಮಾಲೆಯಾ ರಾಷ್ಟ್ರೀಯ ಪರಿಸರ ವಿಜ್ಞಾನ ಮತ್ತು ಗಣಿತ ಸಂಶೋಧನಾ ಕೇಂದ್ರದಲ್ಲಿ ಹಿರಿಯ ಸಂಶೋಧಕರಾಗಿ ಕೆಲಸ ಮಾಡುತ್ತಿದ್ದರು. ಮೃತದೇಹ ಪತ್ತೆಯಾದ ಕೆಲವೇ ಗಂಟೆಗಳಲ್ಲಿ ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ಫೆಡರಲ್ ತನಿಖಾ ಸಂಸ್ಥೆ ತಿಳಿಸಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ