ಡೊನಾಲ್ಡ್ ಟ್ರಂಪ್ ಗೆ ನೀಲಿ ತಾರೆ ತಂದ ಸಂಕಷ್ಟ, ಅಮೆರಿಕಾ ಮಾಜಿ ಅಧ್ಯಕ್ಷರ ಕತೆಯೇನು

sampriya

ಶುಕ್ರವಾರ, 31 ಮೇ 2024 (14:11 IST)
Photo By X
ನ್ಯೂಯಾರ್ಕ್: 2016ರ ಅಧ್ಯಕ್ಷೀಯ ಚುನಾವಣೆ ವೇಳೆ ತಮ್ಮ ವಿರುದ್ಧ ಹೇಳಿಕೆ ನೀಡದಂತೆ ನೀಲಿಚಿತ್ರಗಳ ತಾರೆಗೆ ಹಣ ನೀಡಿದ್ದ ಪ್ರಕರಣದಲ್ಲಿ ಅಮೆರಿಕ ಮಾಜಿ ಅಧ್ಯಕ್ಷ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಈ ಮೂಲಕ ಟ್ರಂಪ್‌ ಅವರಿಗೆ ಬಂಧನದ ಭೀತಿ ಎದುರಾಗಿದೆ. ಟ್ರಂಪ್‌ ನೀಡುವ ಶಿಕ್ಷೆಯನ್ನು ಮುಂದಿನ ವಾರ ಪ್ರಕಟಿಸಲಾಗುವುದಾಗಿ ನ್ಯಾಯಾಲಯ ಹೇಳಿದೆ.

ಇನ್ನೂ ಬಂಧನದ ಭೀತಿ ಹಿನ್ನೆಲೆತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಈಗಾಗಲೇ ಟ್ರಂಪ್ ಸಿದ್ಧತೆ ಮಾಡಿಕೊಂಡಿದ್ದಾರೆ.

ಎಲ್ಲ ಸಿದ್ದತೆ ಮಾಡಿಕೊಂಡಿದ್ದಾರೆ. ಹಾಗಾಗಿ ಈ ತೀರ್ಪು ಟ್ರಂಪ್ 2024ರ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದನ್ನು ತಡೆಯಲಾಗುವುದಿಲ್ಲ ಎಂದು ವರದಿಯಾಗಿದೆ.  2014ರ ಅಧ್ಯಕ್ಷೀಯ ಚುನಾವಣೆ ವೇಳೆ ನೀಲಿಚಿತ್ರಗಳ ತಾರೆ ಸ್ಟಾರ್ಮಿ ಡೇನಿಯಲ್ಸ್‌ ಅವರು ‘ನಾನು ಟ್ರಂಪ್‌ ಜೊತೆ ಲೈಂಗಿಕ ಸಂಬಂಧ ಹೊಂದಿದ್ದೆ’ ಎಂದು ಹೇಳಿದ್ದರು.  ಆದರೆ ಈ ಬಗ್ಗೆ ಹೇಳಿಕೆ ನೀಡದಂತೆ ಹಣ ನೀಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ