ನ್ಯೂಯಾರ್ಕ್ : ಸಿಲಿಕಾನ್ ವ್ಯಾಲಿ ಬ್ಯಾಂಕ್ ಮತ್ತು ಸಿಗ್ನೇಚರ್ ಬ್ಯಾಂಕ್ ಪತನಗೊಂಡ ಬೆನ್ನಲ್ಲೇ ಇದೀಗ ಅಮೆರಿಕದ ಫಸ್ಟ್ ರಿಪಬ್ಲಿಕ್ ಬ್ಯಾಂಕ್ ಕೂಡಾ ಪತನಗೊಂಡು ಅಮೆರಿಕಾದ ಬ್ಯಾಂಕಿಂಗ್ ಕ್ಷೇತ್ರಕ್ಕೆ ಭಾರೀ ಪ್ರಮಾಣದ ಹೊಡೆತವನ್ನು ನೀಡಿದೆ.
ವಿಶ್ವದ ಬಲಿಷ್ಠ ಆರ್ಥಿಕ ರಾಷ್ಟ್ರಗಳ ಪೈಕಿ ಅಮೆರಿಕ ಮುಂಚೂಣಿಯಲ್ಲಿದೆ. 2 ತಿಂಗಳ ಹಿಂದಷ್ಟೆ ಅಮೆರಿಕದ ಜನಪ್ರಿಯ ಬ್ಯಾಂಕ್ಗಳಾದ ಸಿಲಿಕಾನ್ ವ್ಯಾಲಿ ಬ್ಯಾಂಕ್ ಹಾಗೂ ಸಿಗ್ನೇಚರ್ ಬ್ಯಾಂಕ್ಗಳು ಪತನಗೊಂಡಿದ್ದವು.
ಇದರಿಂದ ಗ್ರಾಹಕರಲ್ಲಿ ಮೂಡಿದ್ದ ಆತಂಕವೇ ಫಸ್ಟ್ ರಿಪಬ್ಲಿಕ್ ಬ್ಯಾಂಕ್ ಪತನಕ್ಕೆ ಕಾರಣವಾಗಿದೆ. ರಿಪಬ್ಲಿಕ್ ಬ್ಯಾಂಕ್ ದಿವಳಿ ಅಂಚಿಗೆ ಸಿಲುಕಿದ ಹಿನ್ನೆಲೆ ಕ್ಯಾಲಿಫೋರ್ನಿಯಾದ ಹಣಕಾಸು ಸಂರಕ್ಷಣೆ ಹಾಗೂ ನಾವೀನ್ಯತೆ ಅದನ್ನು ಮುಟ್ಟುಗೋಲು ಹಾಕಿಕೊಂಡಿದೆ.