ಪ್ರಧಾನಿ ಮೋದಿ ಆರ್ಥಿಕ ವೇಗದ ಹರಿಕಾರ, ಸಮರ್ಥ ಶಕ್ತಿಶಾಲಿ ನಾಯಕ: ಟ್ರಂಪ್

ಮಂಗಳವಾರ, 18 ಅಕ್ಟೋಬರ್ 2016 (14:36 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಭಾರತ ದೇಶವನ್ನು ಆರ್ಥಿಕ ಸುಧಾರಣೆಯತ್ತ ವೇಗದಿಂದ ಸಾಗುತ್ತಿದ್ದಾರೆ. ಭಾರತದೊಂದಿಗೆ ಸದಾ ಉತ್ತಮ ಭಾಂದವ್ಯ ಹೊಂದಲು ಬಯಸುತ್ತೇನೆ ಎಂದು ರಿಪಬ್ಲಿಕನ್ ಪಕ್ಷದ ಅಮೆರಿಕ ಅಧ್ಯಕ್ಷೀಯ ಚುನಾವಣೆ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 
 
ಒಂದು ವೇಳೆ, ನಾನು ಅಮೆರಿಕದ ಅಧ್ಯಕ್ಷನಾಗಿ ಆಯ್ಕೆಯಾದಲ್ಲಿ ಭಾರತೊಂದಿಗೆ ಉತ್ತಮ ಸ್ನೇಹವನ್ನು ಬಯಸುತ್ತೇನೆ. ಭಾರತ ಮತ್ತು ಅಮೆರಿಕ ಆತ್ಮಿಯ ಮಿತ್ರ ರಾಷ್ಟ್ರಗಳಾಗಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
 
ಭಾರತೀಯರು ಮತ್ತು ಹಿಂದೂಗಳ ಬಗ್ಗೆ ನನಗೆ ಅಪಾರ ಗೌರವವಿದೆ. ಭಾರತ ಮತ್ತು ಅಮೆರಿಕ ಒಂದಾಗಿ ಸಾಗಿದಲ್ಲಿ ಉಭಯ ರಾಷ್ಟ್ರಗಳಿಗೂ ಒಳ್ಳೆಯ ಭವಿಷ್ಯವಿದೆ ಎಂದು ಅಭಿಪ್ರಾಯಪಟ್ಟರು.
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರೊಂದಿಗೆ ಕೆಲಸ ಮಾಡಲು ಬಯಸುತ್ತೇನೆ. ಅವರೊಬ್ಬ ಸಮರ್ಥ ನಾಯಕರಾಗಿದ್ದಾರೆ ಎಂದು ಡೊನಾಲ್ಡ್ ಟ್ರಂಪ್ ಬಣ್ಣಿಸಿದರು.
 
ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಅಭ್ಯರ್ಥಿಯೊಬ್ಬರು ಮೊಟ್ಟ ಮೊದಲ ಬಾರಿಗೆ ಚುನಾವಣೆ ಸಂದರ್ಭದಲ್ಲಿ ಭಾರತೀಯರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ವೆಬ್ದುನಿಯಾವನ್ನು ಓದಿ