ವಾಷಿಂಗ್ಟನ್ : ಯೂಟ್ಯೂಬ್ ಹಾಗೂ ಫೇಸ್ಬುಕ್ಗಳಲ್ಲಿ 2 ವರ್ಷಗಳ ಕಾಲ ಬ್ಯಾನ್ ಆಗಿದ್ದ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಖಾತೆಗಳು ಇದೀಗ ಮರಳಿ ಬಂದಿದೆ.
2021ರ ಜನವರಿ 6ರಂದು ಟ್ರಂಪ್ ಬೆಂಬಲಿಗರು ಸರ್ಕಾರಿ ಕಟ್ಟಡಗಳ ಮೇಲೆ ದಾಳಿ ಮಾಡಿದ್ದರು. ಈ ಹಿಂಸಾಚಾರಕ್ಕೆ ಟ್ರಂಪ್ ಪ್ರಚೋದನೆ ನೀಡುವಂತಹ ಪೋಸ್ಟ್ಗಳನ್ನು ಹಾಕಿದ್ದಕ್ಕೆ ಅವರ ಯೂಟ್ಯೂಬ್ ಹಾಗೂ ಫೇಸ್ಬುಕ್ ಖಾತೆಗಳನ್ನು ಬ್ಯಾನ್ ಮಾಡಲಾಗಿತ್ತು. ಇದೀಗ 2 ವರ್ಷಗಳ ಬಳಿಕ ಅವರ ಖಾತೆಗಳನ್ನು ಮತ್ತೆ ಸ್ಥಾಪಿಸಲಾಗಿದೆ.
ಫೇಸ್ಬುಕ್ ಹಾಗೂ ಯೂಟ್ಯೂಬ್ಗೆ ಮರಳುತ್ತಲೇ ಟ್ರಂಪ್ ಪೋಸ್ಟ್ಗಳನ್ನು ಹಾಕಿದ್ದಾರೆ. ಶುಕ್ರವಾರ ಟ್ರಂಪ್ ಪೋಸ್ಟ್ ಒಂದನ್ನು ಹಾಕಿ, ಐ ಆಮ್ ಬ್ಯಾಕ್ (ನಾನು ಮರಳಿ ಬಂದಿದ್ದೇನೆ) ಎಂದು ಬರೆದಿದ್ದಾರೆ. ಮಾತ್ರವಲ್ಲದೇ ಇಲ್ಲಿವರೆಗೆ ನಿಮ್ಮನ್ನು ಕಾಯಿಸಿರುವುದಕ್ಕೆ ಕ್ಷಮಿಸಿ ಎಂದು ತಮ್ಮ ಅಭಿಮಾನಿಗಳಿಗೆ ತಿಳಿಸಿದ್ದಾರೆ.