ವಿಜಯ್ ಮಲ್ಯನನ್ನು ಹೊರ ಹಾಕಿದ ಯುಕೆ ಕೋರ್ಟ್!
ವಿಜಯ್ ಮಲ್ಯ ಅಲ್ಲದೇ ಇಡೀ ಕುಟುಂಬವನ್ನು ಲಂಡನ್ನ ಮನೆಯಿಂದ ಹೊರಹಾಕುವಂತೆ ನ್ಯಾಯಾಲಯ ಆದೇಶ ನೀಡಿದೆ. ಮಲ್ಯ ಅವರ ಕೋಟ್ಯಂತರ ರೂ. ಬೆಲೆ ಬಾಳುವ ಐಷಾರಾಮಿ ಮನೆಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳಬೇಕೇ? ಬೇಡವೇ ಎಂಬುದರ ಬಗ್ಗೆ ಹೈಕೋರ್ಟ್ ಕಳೆದ ವಾರ ತೀರ್ಪನ್ನು ಕಾಯ್ದಿರಿಸಿತ್ತು.
ಇಂದು ತೀರ್ಪು ಪ್ರಕಟಿಸಿದ ಕೋರ್ಟ್, ಮಲ್ಯ ಅವರ ಮನೆಯನ್ನು ಸ್ವಿಸ್ ಬ್ಯಾಂಕ್ ಯುಬಿಎಸ್ ಸ್ವಾಧೀನಪಡಿಸಿಕೊಳ್ಳಬೇಕು ಎಂದು ಆದೇಶಿಸಿದೆ.
9 ಸಾವಿರ ಕೋಟಿ ರೂಪಾಯಿ ಬ್ಯಾಂಕ್ ಗಳಿಗೆ ಬಾಕಿ ಹಣ ನೀಡಬೇಕಿರುವ ವಿಜಯ್ ಮಲ್ಯ ಅವರ ಲಂಡನ್ ನಲ್ಲಿರುವ ಆಸ್ತಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಇಂಗ್ಲೆಂಡ್ ನ್ಯಾಯಾಲಯದಲ್ಲಿ 13 ಭಾರತೀಯ ಬ್ಯಾಂಕ್ ಗಳ ಒಕ್ಕೂಟ ಕಾನೂನು ಸಮರ ನಡೆಸುತ್ತಿದೆ.