ಗೌರಿ ಲಂಕೇಶ್ ಹತ್ಯೆಯಿಂದ ಪತ್ರಿಕಾ ಸ್ವಾತಂತ್ರ್ಯಹರಣ: ರಿಚರ್ಡ್ ವೆರ್ಮಾ

ಬುಧವಾರ, 6 ಸೆಪ್ಟಂಬರ್ 2017 (16:09 IST)
ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಅಮೆರಿಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ನವದೆಹಲಿಯಲ್ಲಿರುವ ಅಮೆರಿಕದ ರಾಯಭಾರಿ ಕಚೇರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಗೌರಿ ಲಂಕೇಶ್ ಹತ್ಯೆ ಪತ್ರಿಕಾ ಸ್ವಾತಂತ್ರ್ಯಹರಣ ಎಂದು ಆಕ್ರೋಶ ವ್ಯಕ್ತಪಡಿಸಿದೆ.
 
ಹಿರಿಯ ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹತ್ಯೆಯಿಂದ ಪತ್ರಿಕಾರಂಗ ಬಡವಾಗಿದೆ. ಅವರನ್ನು ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದೆ.
 
ಗೌರಿ ಲಂಕೇಶ್ ಹತ್ಯೆಗೆ ವಿಶ್ವದಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿದ್ದು, ದೇಶದ ಪ್ರತಿಯೊಬ್ಬ ನಾಗರಿಕರಲ್ಲಿ ಆಕ್ರೋಶ ಮನೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ