ಹಸ್ತಾಂತರ ಪ್ರಕ್ರಿಯೆ ಪೂರ್ಣ: ಶೀಘ್ರವೇ ವಿಜಯ್ ಮಲ್ಯ ಭಾರತಕ್ಕೆ

ಗುರುವಾರ, 4 ಜೂನ್ 2020 (10:29 IST)
ಲಂಡನ್: ಭಾರತದ ಬ್ಯಾಂಕ್ ಗಳಲ್ಲಿ ಸಾವಿರಾರು ಕೋಟಿ ರೂ. ಸಾಲ ಮಾಡಿ ಲಂಡನ್ ನಲ್ಲಿ ತಲೆಮರೆಸಿಕೊಂಡಿದ್ದ ಮದ್ಯದೊರೆ ವಿಜಯ್ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಂಡಿದೆ.


ಶೀಘ್ರದಲ್ಲೇ ಮಲ್ಯ ಭಾರತಕ್ಕೆ ಗಡೀಪಾರಾಗಲಿದ್ದಾರೆ. ಬ್ರಿಟನ್ ಸುಪ್ರೀಂ ಕೋರ್ಟ್ ನಲ್ಲಿ ಮಲ್ಯ ವಿರುದ್ಧವಾಗಿ ತೀರ್ಪು ಬಂದಿದ್ದು, ಯಾವುದೇ ಕ್ಷಣದಲ್ಲೂ ಭಾರತಕ್ಕೆ ಗಡೀಪಾರಾಗಬಹುದು ಎನ್ನಲಾಗಿದೆ.

ಮೇ 14 ರಂದು ಸುಪ್ರೀಂಕೋರ್ಟ್ ಮಲ್ಯ ಮೇಲ್ಮನವಿಯನ್ನು ತಳ್ಳಿ ಹಾಕಿತ್ತು. ಇದಾದ 28 ದಿನಗಳೊಳಗೆ ಗಡೀಪಾರು ಪ್ರಕ್ರಿಯೆ ಮಾಡಬೇಕಾಗುತ್ತದೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಮದ್ಯ ದೊರೆ ಭಾರತಕ್ಕೆ ಹಸ್ತಾಂತರವಾಗಲಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ