ರಷ್ಯಾದ ಅಧ್ಯಕ್ಷರಾಗಿ ನಾಲ್ಕನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ವ್ಲಾಡಿಮಿರ್‌ ಪುಟಿನ್‌

ಮಂಗಳವಾರ, 8 ಮೇ 2018 (13:46 IST)
ಮಾಸ್ಕೋ : ರಷ್ಯಾದ ಅಧ್ಯಕ್ಷರಾಗಿ ನಾಲ್ಕನೇ ಬಾರಿ ಆಯ್ಕೆಯಾದ ವ್ಲಾಡಿಮಿರ್‌ ಪುಟಿನ್‌ ಅವರು ಸೋಮವಾರ ನಡೆದ ಸಮಾರಂಭದಲ್ಲಿ ಪ್ರಮಾಣ ವಚನ  ಸ್ವೀಕರಿಸಿದ್ದಾರೆ.


1999 ರಿಂದಲೂ ಅಧ್ಯಕ್ಷ ಸ್ಥಾನದಲ್ಲಿರುವ ಪುಟಿನ್‌ ಅವರು ಮಾರ್ಚ್‌ ತಿಂಗಳಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಶೇ76.7 ರಷ್ಟು ಮತಗಳನ್ನು ಪಡೆದು ಪುನರಾಯ್ಕೆಯಾಗಿದ್ದರು.


ಈ ಸಮಾರಂಭದಲ್ಲಿ ಮಾತನಾಡಿದ ಅವರು 'ರಷ್ಯಾದ ವರ್ತಮಾನ ಮತ್ತು ಭವಿಷ್ಯಕ್ಕೆ ಏನು ಬೇಕೊ ಅದನ್ನು ಸಾಧಿಸಿಕೊಡುವುದು ನನ್ನ ಬದುಕಿನ ಗುರಿ ಮತ್ತು ಕರ್ತವ್ಯ. ನನ್ನ ಮೇಲಿರುವ ಗುರುತರವಾದ ಜವಾಬ್ದಾರಿಗಳ ಬಗ್ಗೆ ನನಗೆ ಸಂಪೂರ್ಣ ಅರಿವಿದೆ. ರಾಷ್ಟ್ರದ ಸಮೃದ್ಧಿ ಹಾಗೂ ಬಲವರ್ಧನೆಗಾಗಿ ಶ್ರಮಿಸುತ್ತೇನೆ'ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ