ಇಸ್ಲಾಮಾಬಾದ್ : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿರುವ ಶೆಹಬಾಜ್ ಷರೀಫ್ ಅವರಿಗೆ ನರೇಂದ್ರ ಮೋದಿ ಹಾರೈಕೆಯ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಷರೀಫ್ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.
ಇದರೊಂದಿಗೆ ಷರೀಫ್ ಪಾಕಿಸ್ತಾನ ಭಾರತದೊಂದಿಗೆ ಶಾಂತಿಯುತ ಹಾಗೂ ಸಹಕಾರಿ ಬಾಂಧವ್ಯ ಬಯಸುತ್ತದೆ ಎಂದು ರೀಟ್ವೀಟ್ ಮಾಡಿದ್ದಾರೆ.
ಷರೀಫ್ ಪಾಕಿಸ್ತಾನದ ಪ್ರಧಾನಿಯಾಗುತ್ತಿದ್ದಂತೆ ಅಭಿನಂದಿಸಿದ ಮೋದಿ, ಭಾರತ ಭಯೋತ್ಪಾದನೆ ಮುಕ್ತ ಪ್ರದೇಶ, ಶಾಂತಿ ಹಾಗೂ ಸ್ಥಿರತೆಯನ್ನು ಬಯಸುತ್ತದೆ.
ಇದರಿಂದ ನಾವು ನಮ್ಮ ಅಭಿವದ್ಧಿ ಸವಾಲುಗಳ ಮೇಲೆ ಕೇಂದ್ರೀಕರಿಸಬಹುದು. ಜೊತೆಗೆ ನಮ್ಮ ಜನರ ಯೋಗಕ್ಷೇಮ ಹಾಗೂ ಸಮೃದ್ಧಿಯನ್ನು ಖಚಿತಪಡಿಸಿಕೊಳ್ಳಬಹುದು ಎಂದು ತಿಳಿಸಿದ್ದರು.
ಇದಕ್ಕೆ ಪ್ರತಿಕ್ರಿಯಿಸಿದ ಪಾಕ್ ಪ್ರಧಾನಿ, ಮೋದಿಗೆ ಧನ್ಯವಾದ ತಿಳಿಸಿ, ಪಾಕಿಸ್ತಾನ ಭಾರತದೊಂದಿಗೆ ಶಾಂತಿಯುತ ಮತ್ತು ಸಹಕಾರದ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಬಾಕಿ ಉಳಿದಿರುವ ವಿವಾದಗಳ ಶಾಂತಿಯುತ ಇತ್ಯರ್ಥ ಅನಿವಾರ್ಯವಾಗಿದೆ.