ಯುದ್ಧ : ಕ್ಷಿಪಣಿ ಮೇಲೆ ಬಾಂಬ್ ದಾಳಿ

ಭಾನುವಾರ, 13 ಮಾರ್ಚ್ 2022 (09:11 IST)
ಕೀವ್ : ಉಕ್ರೇನ್ ವಿರುದ್ಧ ಯುದ್ಧ ಸಾರಿರುವ ರಷ್ಯಾದ ದಾಳಿ 18ನೇ ದಿನಕ್ಕೆ ಕಾಲಿಟ್ಟಿದೆ. ಉಕ್ರೇನ್ನ ಪ್ರಾರ್ಥನಾ ಮಂದಿರಗಳನ್ನು ಬಿಡದೆ ರಷ್ಯಾ ದಾಳಿ ಮುಂದುವರಿಸಿದೆ.
ರಷ್ಯಾ ಮಿಲಿಟರಿ ಪಡೆ ಉಕ್ರೇನ್ ರಾಜಧಾನಿ ಕೀವ್ ನಗರಕ್ಕೆ 4 ಕಿ.ಮೀ ದೂರದಲ್ಲಿ ಇದ್ದು ಕೀವ್ ವಶಪಡಿಸಿಕೊಳ್ಳಲು ಹರಸಾಹಸ ಪಡುತ್ತಿದೆ. ಉಕ್ರೇನ್ನ ಕೀವ್ ಮತ್ತು ಖಾರ್ಕಿವ್ ನಗರದಲ್ಲಿ ಘನಘೋರ ಯುದ್ಧ ಆಗುತ್ತಿದ್ದು, ರಷ್ಯಾದ ಕ್ಷಿಪಣಿ, ಬಾಂಬ್ ದಾಳಿಗೆ ನಗರಗಳು ಹೊತ್ತಿ ಉರಿಯುತ್ತಿದೆ.

ಇನ್ನೊಂದೆಡೆ ಮರಿಯುಪೋಲ್ನಲ್ಲಿ ರಷ್ಯಾದ ದಾಳಿಗೆ ಸಿಕ್ಕ ಸಿಕ್ಕಲ್ಲಿ ರಕ್ತಪಾತವಾಗುತ್ತಿದೆ. ಕೀವ್ ನಗರಕ್ಕೆ ಮತ್ತಷ್ಟು ಹತ್ತಿರವಾದ ರಷ್ಯಾ ಸೇನೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರದೊಂದಿಗೆ ಲಗ್ಗೆ ಇಟ್ಟಿದೆ. ಈಗಾಗಲೇ ಎರಡು ಕಡೆಯ ನೂರಾರು ಯುದ್ಧ ಟ್ಯಾಂಕರ್ಗಳು ಉಡೀಸ್ ಆಗಿದೆ. 

ಉಕ್ರೇನ್ ಪ್ರತಿರೋಧ ಮತ್ತಷ್ಟು ತೀವ್ರಗೊಳಿಸಿದ್ದು, ರಷ್ಯಾದ 2 ಹೆಲಿಕಾಪ್ಟರ್ಗಳನ್ನು ಹೊಡೆದುರುಳಿಸಿದೆ. ಖೆರ್ಸನ್ ಬಳಿಯ ಒಬ್ಲಾಸ್ಟ್ ಸಮೀಪ ಹೆಲಿಕಾಫ್ಟರ್ ಧ್ವಂಸವಾಗಿದೆ.

ರಷ್ಯಾ ದಾಳಿಗೆ ಉಕ್ರೇನ್ ಪ್ರತಿರೋಧ ಒಡ್ಡುತ್ತಿರುವ ನಡುವೆಯೂ ರಷ್ಯಾ ಅಧ್ಯಕ್ಷ ಪುಟಿನ್ ಜೊತೆ ಮಾತುಕತೆಗೆ ಸಿದ್ಧ ಎಂದು ವೊಲೊಡಿಮಿರ್ ಝೆಲೆನ್ಸ್ಕಿ ಪುನರುಚ್ಚರಿಸಿದ್ದಾರೆ. ನಾವು ಮಾತುಕತೆಗೆ ಸಿದ್ಧ ಆದರೆ ನಾವು ತಿಳಿಸುವ ಸ್ಥಳಕ್ಕೆ ಪುಟಿನ್ ಬಂದರೆ ಮಾತ್ರ ಎಂದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ