ಭಾರತೀಯ ಸೇನೆ ಬಗ್ಗುಬಡಿಯುವುದು ನಮಗೆ ಗೊತ್ತಿದೆ: ಪಾಕ್ ವಾಯುಸೇನೆ ಮುಖ್ಯಸ್ಥ

ಗುರುವಾರ, 24 ನವೆಂಬರ್ 2016 (16:03 IST)
ಕಾಶ್ಮಿರ ವಿವಾದವನ್ನು ಉಲ್ಬಣಿಸಿ ಪಾಕ್ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸುತ್ತಿರುವ ಭಾರತಕ್ಕೆ ಯಾವ ರೀತಿ ಪಾಠ ಕಲಿಸಬೇಕು ಎನ್ನುವುದು ನಮಗೆ ಗೊತ್ತಿದೆ ಎಂದು ಪಾಕಿಸ್ತಾನದ ವಾಯುಸೇನಾ ಮುಖ್ಯಸ್ಥ ಎಚ್ಚರಿಕೆ ನೀಡಿದ್ದಾರೆ.
 
ಕಳೆದ ಎರಡು ದಿನಗಳಿಂದ ನಿರಂತರವಾಗಿ ಉಭಯ ದೇಶಗಳ ಗಡಿಯಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿರುವ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಾಯುಸೇನೆ ಮುಖ್ಯಸ್ಥ ಸೋಹೈಲ್ ಅಮನ್ ಭಾರತಕ್ಕೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. 
 
ಬುಧವಾರದಂದು ಭಾರತೀಯ ಸೇನೆ ನಡೆಸಿದ ಗುಂಡಿನ ದಾಳಿಗೆ ಮೂವರು ಯೋಧರು ಸೇರಿದಂತೆ 12 ನಾಗರಿಕರು ಬಲಿಯಾಗಿದ್ದಾರೆ ಎಂದು ಪಾಕಿಸ್ತಾನ ಸೇನೆ ಆರೋಪಿಸಿದೆ.
 
ಭಾರತ ತಾಳ್ಮೆಯನ್ನು ತೋರುವುದು ಸೂಕ್ತ. ಒಂದು ವೇಳೆ, ನವದೆಹಲಿ ಬಿಕ್ಕಟ್ಟು ಹೆಚ್ಚಿಸಿದಲ್ಲಿ ಪಾಕಿಸ್ತಾನದ ಸೇನೆಗೆ ಭಾರತೀಯ ಸೇನೆಯನ್ನು ಹೇಗೆ ಬಗ್ಗು ಬಡಿಯಬೇಕು ಎನ್ನುವುದು ಗೊತ್ತಿದೆ ಎಂದು ತಿಳಿಸಿದ್ದಾರೆ. 
 
ಕಳೆದ ಸೆಪ್ಟೆಂಬರ್ 29 ರಂದು ಭಾರತೀಯ ಸೇನೆ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಸೀಮಿತ ದಾಳಿ ನಡೆಸಿದ ನಂತರ ಉಭಯ ದೇಶಗಳಲ್ಲಿ ಉದ್ರಿಕ್ತ ವಾತಾವರಣ ಉಂಟಾಗಿದೆ.
 
ಉತ್ತರ ಕಾಶ್ಮಿರದ ಉರಿ ಸೇನಾ ಕೇಂದ್ರದ ಮೇಲೆ ಉಗ್ರರು ದಾಳಿ ನಡೆಸಿ 19 ಸೈನಿಕರನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಭಾರತೀಯ ಸೇನೆ ಸೀಮಿತ ದಾಳಿ ನಡೆಸಿ ಸೇಡು ತೀರಿಸಿಕೊಂಡಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ