ಇಸ್ಲಾಮಿಕ್ ಉಗ್ರವಾದವನ್ನು ಧ್ವಂಸಗೊಳಿಸುತ್ತೇವೆ. ಉಗ್ರರನ್ನು ನಿರ್ಮೂಲನೆಗೊಳಿಸುವುದೇ ನಮ್ಮ ಗುರಿಯಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುಡುಗಿದ್ದಾರೆ.
ಪ್ರಧಾನಿ ಮೋದಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಭಾರತ ಅಮೆರಿಕದ ನಿಜವಾದ ಸ್ನೇಹಿತ. ಅಮೆರಿಕ ಭಾರತದೊಂದಿಗೆ ಸದಾ ಅತ್ಯುತ್ತಮ ಭಾಂದವ್ಯ ಹೊಂದಲು ಬಯಸುತ್ತದೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದೊಂದಿಗೆ ಜತೆಯಾಗಿ ಉಗ್ರರನ್ನು ಸದೆಬಡೆಯುವ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಅಮೆರಿಕದಿಂದ ಶಸ್ತ್ರಾಸ್ತ್ರ ಖರೀದಿಸಿದ್ದಕ್ಕೆ ಧನ್ಯವಾದಗಳು.ಭಾರತದೊಂದಿಗೆ ಅಮೆರಿಕ ಮುಂಬರುವ ದಿನಗಳಲ್ಲಿ ಒಂದಾಗಿ ಕಾರ್ಯನಿರ್ವಹಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.