ವಾಷಿಂಗ್ಟನ್ : ಕಳೆದ ಎರಡು ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರನ್ನ ಟ್ವಿಟ್ಟರ್ನಲ್ಲಿ ಫಾಲೋ ಮಾಡಲು ಶುರುಮಾಡಿದ ಟೆಸ್ಲಾ ಮುಖ್ಯಸ್ಥ ಹಾಗೂ ಟ್ವಿಟ್ಟರ್ ಸಿಇಒ ಎಲೋನ್ ಮಸ್ಕ್ ಇದೀಗ ಗುಜರಾತ್ ಗಲಭೆ, ಪ್ರಧಾನಿ ಮೋದಿ ಅವರ ಕುರಿತು ಬಿಬಿಸಿ ನಿರ್ಮಿಸಿದ್ದ ಸಾಕ್ಷ್ಯಚಿತ್ರ ಪ್ರಸಾರದಲ್ಲಿ ಟ್ವಿಟ್ಟರ್ ಪಾತ್ರದ ಕುರಿತು ಮಾತನಾಡಿದ್ದಾರೆ.
ಬಿಬಿಸಿಗೆ ನೀಡಿದ ಸಂದರ್ಶನದಲ್ಲಿ ಟ್ವಿಟರ್ ವೇದಿಕೆಯಲ್ಲಿ ಲೈವ್ ಪ್ರಸಾರ ಮಾಡಿದ್ದರಿಂದ, ಭಾರತ ಸರ್ಕಾರದ ಆದೇಶದ ಮೇರೆಗೆ ಸೈಟ್ ಕೆಲವು ವಿಷಯವನ್ನು ತೆಗೆದುಹಾಕಿದೆಯೇ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಸ್ಕ್, ನನಗೆ ಈ ನಿರ್ದಿಷ್ಟ ಸನ್ನಿವೇಶದ ಬಗ್ಗೆ ತಿಳಿದಿಲ್ಲ. ಭಾರತದಲ್ಲಿನ ಕೆಲವು ವಿಷಯಗಳಲ್ಲಿ ಪರಿಸ್ಥಿತಿ ನಿಖರವಾಗಿ ಏನಾಯಿತು ಎಂದು ತಿಳಿದಿಲ್ಲ ಎಂದು ಹೇಳಿದ್ದಾರೆ.