ಸಿಡ್ನಿ: ಆಸ್ಟ್ರೇಲಿಯಾದ ಸಂಸತ್ತಿನ ಆವರಣದಲ್ಲೇ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಘಟನೆ ವರದಿಯಾಗಿದ್ದು, ಪ್ರಧಾನಿ ಸ್ಕಾಟ್ ಮೋರಿಸನ್ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.
2019 ರಲ್ಲಿ ಈ ಘಟನೆ ನಡೆದಿತ್ತು ಎಂದು ಮಹಿಳೆ ಆರೋಪಿಸಿದ್ದಾಳೆ. ತನ್ನ ಸಹೋದ್ಯೋಗಿಯೇ ಈ ಕೃತ್ಯವೆಸಗಿದ್ದಾನೆ ಎಂದು ಆಕೆ ದೂರಿನಲ್ಲಿ ತಿಳಿಸಿದ್ದಾಳೆ. ಈ ಬಗ್ಗೆ ಕ್ಷಮೆ ಯಾಚಿಸಿರುವ ಪ್ರಧಾನಿ ಸ್ಕಾಟ್ ಮೋರಿಸನ್, ನಡೆದಿರುವ ಪ್ರಮಾದದ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.