ಬೀಜಿಂಗ್ : ಚೀನಾದ ಅಧ್ಯಕ್ಷನಾಗಿ ಕ್ಸಿ ಜಿನ್ಪಿಂಗ್ 3ನೇ ಅವಧಿಗೆ ಮತ್ತೆ ಆಯ್ಕೆಯಾಗಿದ್ದು, ಈ ಮೂಲಕ ಅವರು ದಾಖಲೆ ಸೃಷ್ಟಿಸಿದ್ದಾರೆ.
ಸಂಸತ್ತಿನ ಸುಮಾರು 3,000 ಸದಸ್ಯರು ನ್ಯಾಷನಲ್ ಪೀಪಲ್ಸ್ ಕಾಂಗ್ರೆಸ್ನ ಜಿನ್ಪಿಂಗ್ಗೆ ಚೀನಾದ ಅಧ್ಯಕ್ಷರಾಗಲು ಸರ್ವಾನುಮತದಿಂದ ಮತ ಹಾಕಿದ್ದಾರೆ. ಚುನಾವಣೆಯಲ್ಲಿ ಕ್ಸಿಗೆ ಪ್ರತಿಸ್ಪರ್ಧಿಯಾಗಿ ಯಾವುದೇ ಅಭ್ಯರ್ಥಿ ಇರಲಿಲ್ಲ ಎಂದು ವರದಿಗಳು ತಿಳಿಸಿವೆ.
ಚೀನಾದ ಹೊಸ ಸಂಸತ್ತಿನ ಅಧ್ಯಕ್ಷರಾಗಿ ಝಾವೊ ಲೆಜಿ ಮತ್ತು ಹೊಸ ಉಪಾಧ್ಯಕ್ಷರಾಗಿ ಹಾನ್ ಝೆಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಅವರಿಬ್ಬರೂ ಕ್ಸಿ ಅವರ ಹಿಂದಿನ ಪಾಲಿಟ್ಬ್ಯುರೊ ಸ್ಥಾಯಿ ಸಮಿತಿಯ ಪಕ್ಷದ ನಾಯಕರ ತಂಡದಲ್ಲಿದ್ದರು ಎನ್ನಲಾಗಿದೆ.