ಯೋಗಕ್ಕೆ ಯಾವುದೇ ಹಕ್ಕುಸ್ವಾಮ್ಯ, ಪೇಟೆಂಟ್‌ಗಳಿಲ್ಲ : ನರೇಂದ್ರ ಮೋದಿ

ಗುರುವಾರ, 22 ಜೂನ್ 2023 (12:34 IST)
ವಾಷಿಂಗ್ಟನ್: ಯೋಗ ಭಾರತದಿಂದ ಬಂದಿದ್ದು, ಅತ್ಯಂತ ಹಳೆಯ ಸಂಪ್ರದಾಯವಾಗಿದೆ. ಯೋಗಾಸನಗಳನ್ನು ಮಾಡಲು ಯಾವುದೇ ವಯಸ್ಸು, ಲಿಂಗ ಭೇದವಿಲ್ಲ. ಮಾತ್ರವಲ್ಲದೆ ಪ್ರತಿಯೊಬ್ಬರ ಆರೋಗ್ಯದ ಮಟ್ಟಕ್ಕೂ ಇದು ಹೊಂದಿಕೊಳ್ಳುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
 
ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ವಿಶ್ವ ಯೋಗ ದಿನದ ನೇತೃತ್ವ ವಹಿಸಿದ ಮೋದಿ, ಕಳೆದ ವರ್ಷ ಇಡೀ ವಿಶ್ವವೇ 2023ರಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಭಾರತದ ಪ್ರಸ್ತಾಪವನ್ನು ಒಮ್ಮತದಿಂದ ಒಪ್ಪಿಕೊಂಡಿತು. ಇದೀಗ ಜಗತ್ತು ಈ ವಿಶೇಷ ದಿನಕ್ಕಾಗಿ ಒಟ್ಟುಗೂಡಿರುವುದು ಹೆಮ್ಮೆಯ ವಿಚಾರವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕಾರ್ಯಕ್ರಮ ಸಂಪೂರ್ಣ ಮಾನವೀಯತೆಯ ಸಂಗಮ ಸ್ಥಳದಲ್ಲಿ ನಡೆಯುತ್ತಿದೆ. ನಿಮ್ಮೆಲ್ಲರನ್ನೂ ನೋಡಲು ನನಗೆ ಸಂತೋಷವಾಗಿದೆ ಹಾಗೂ ವಿಶ್ವ ಯೋಗ ದಿನವನ್ನಾಚರಿಸಲು ಬಂದ ಪ್ರತಿಯೊಬ್ಬರಿಗೂ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ