ಐಪಿಎಲ್: ಕೂಟದಲ್ಲಿ ಮೊದಲ ಸೋಲುಂಡ ಚೆನ್ನೈ
ಗೆಲುವಿನ ಗುರಿ ಬೆನ್ನಟ್ಟಿದ ಚೆನ್ನೈ ಆರಂಭವೇ ಉತ್ತಮವಾಗಿರಲಿಲ್ಲ. ಮಧ್ಯಮ ಕ್ರಮಾಂಕವೂ ವಿಫಲವಾದ್ದರಿಂದ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 133 ರನ್ ಗಳಿಸಲಷ್ಟೇ ಶಕ್ತವಾಯಿತು. 12 ಗಳಿಸಿದ ಧೋನಿ ಚೆನ್ನೈ ಪರ 4000 ರನ್ ಪೂರೈಸಿದ ದಾಖಲೆ ಮಾಡಿದರು. ಕೇದಾರ್ ಜಾಧವ್ 58 ರನ್ ಗಳಿಸಿದ್ದು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಸಾಧನೆ ಬರಲಿಲ್ಲ. ಹೀಗಾಗಿ ಚೆನ್ನೈ ಸೋಲು ಕಂಡಿತು.