ಐಪಿಎಲ್: ಸಿಡಿದ ರಾಬಿನ್ ಉತ್ತಪ್ಪ, ಕೆಕೆಆರ್ ಗೆಲುವಿನ ಕೇಕೆ
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಕ್ರಿಸ್ ಗೇಲ್ ಕೈಕೊಟ್ಟರು. ಆರಂಭದಲ್ಲಿಯೇ ವಿಕೆಟ್ ಕಳೆದುಕೊಂಡರೂ ಮಧ್ಯಮ ಕ್ರಮಾಂಕದಲ್ಲಿ ಮಯಾಂಕ್ ಅಗರ್ವಾಲ್ 58 ಮತ್ತು ಡೇವಿಡ್ ಮಿಲ್ಲರ್ 59 ರನ್ ಬಾರಿಸಿ ತಂಡವನ್ನು ಆಧರಿಸಿದರು. ಆದರೂ 20 ಓವರ್ ಗಳಲ್ಲಿ ಪಂಜಾಬ್ 4 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಷ್ಟೇ ಶಕ್ತವಾಯಿತು. ಇದರೊಂದಿಗೆ ಎರಡನೇ ಪಂದ್ಯದಲ್ಲಿ ಸೋಲುಂಡಿತು.