ಐಪಿಎಲ್: ಜೋಸೆಫ್ ದಾಖಲೆಯ ಬೌಲಿಂಗ್ ಗೆ ಹೈದರಾಬಾದ್ ಉಡೀಸ್

ಭಾನುವಾರ, 7 ಏಪ್ರಿಲ್ 2019 (05:42 IST)
ಮುಂಬೈ: ಸನ್ ರೈಸರ್ಸ್ ಹೈದರಾಬಾದ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ 40 ರನ್ ಗಳಿಂದ ಗೆದ್ದುಕೊಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 136 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೊತ್ತವನ್ನು ಹೈದರಾಬಾದ್ ಸುಲಭವಾಗಿ ಬೆನ್ನಟ್ಟಬಹುದು ಎಂದೇ ಎಲ್ಲರ ಲೆಕ್ಕಾಚಾರವಾಗಿತ್ತು.

ಆದರೆ ಮುಂಬೈ ಇಂಡಿಯನ್ಸ್ ಪರ ಬೌಲಿಂಗ್ ಮಾಡಿದ ಅಲ್ಝಾರಿ ಜೋಸೆಫ್ ದಾಖಲೆಯ ಬೌಲಿಂಗ್ ಮಾಡಿ ಎದುರಾಳಿಗಳನ್ನು ಕೇವಲ 96 ರನ್ ಗಳಿಗೆ ಆಲೌಟ್ ಮಾಡಿದರು. ಜೋಸೆಫ್ 3.4 ಓವರ್ ಬೌಲಿಂಗ್ ಮಾಡಿ ಕೇವಲ 12 ರನ್ ನೀಡಿ 6 ವಿಕೆಟ್ ಕಬಳಿಸಿದರು. ಇದು ಐಪಿಎಲ್ ಇತಿಹಾಸದಲ್ಲೇ ಬೆಸ್ಟ್ ಬೌಲಿಂಗ್ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ