ಐಪಿಎಲ್ 13: ಮತ್ತೆ ಗೆಲುವಿನ ಹಳಿಗೆ ಬಂದ ಡೆಲ್ಲಿ ಕ್ಯಾಪಿಟಲ್ಸ್

ಗುರುವಾರ, 15 ಅಕ್ಟೋಬರ್ 2020 (08:58 IST)
ದುಬೈ: ಐಪಿಎಲ್ 13 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತೆ ಗೆಲುವಿನ ಹಳಿಗೆ ಬಂದಿದೆ. ರಾಜಸ್ಥಾನ್ ವಿರುದ್ಧ 13 ರನ್ ಗಳಿಂದ ಗೆಲುವು ಕಂಡಿದೆ.


ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ನಿಗದಿತ 20 ಓವರ್ ಗಳಲ್ಲಿ ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿತು. ಶಿಖರ್ ಧವನ್ 57, ನಾಯಕ ಶ್ರೇಯಸ್ ಐಯರ್ 53 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ಉತ್ತಮ ಪೈಪೋಟಿ ನೀಡಿತಾದರೂ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಲಷ್ಟೇ ಶಕ್ತವಾಯಿತು. ತಂಡಕ್ಕೆ ಮರಳಿದ ಬೆನ್ ಸ್ಟೋಕ್ಸ್ 41 ರನ್ , ರಾಬಿನ್ ಉತ್ತಪ್ಪ 32 ಮತ್ತು ಸಂಜು ಸ್ಯಾಮ್ಸನ್ 25 ರನ್ ಗಳಿಸಿದರು. ಇದರೊಂದಿಗೆ ಡೆಲ್ಲಿ ಮತ್ತೆ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ