ಐಪಿಎಲ್ 13: ಪ್ಲೇ ಆಫ್ ಕನಸು ಜೀವಂತವಾಗಿರಿಸಿದ ಕಿಂಗ್ಸ್ ಇಲೆವೆನ್ ಪಂಜಾಬ್

ಬುಧವಾರ, 21 ಅಕ್ಟೋಬರ್ 2020 (09:10 IST)
ದುಬೈ: ಐಪಿಎಲ್ 13 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 5 ವಿಕೆಟ್ ಗಳ ಗೆಲುವು ಸಾಧಿಸಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ಪ್ಲೇ ಆಫ್ ಕನಸು ಜೀವಂತವಾಗಿರಿಸಿದೆ.

 

ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಪರ ಆರಂಭಿಕ ಶಿಖರ್ ಧವನ್ ಶತಕ (106) ಗಳಿಸಿದರು. ಇದು ಸತತ ಎರಡನೇ ಪಂದ್ಯದಲ್ಲಿ ಅವರ ಎರಡನೇ ಶತಕವಾಗಿದೆ. ಅವರ ಶತಕದ ನೆರವಿನಿಂದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಪಂಜಾಬ್ 19 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 167 ರನ್ ಗಳಿಸುವ ಮೂಲಕ ಗುರಿ ಮುಟ್ಟಿತು. ಪಂಜಾಬ್ ಪರ ನಿಕಲಸ್ ಪೂರನ್ 53, ಕ್ರಿಸ್ ಗೇಲ್ 29 ರನ್ ಗಳಿಸಿದರು. ಇದರೊಂದಿಗೆ ಕಳೆದ ಮೂರು ಪಂದ್ಯಗಳಲ್ಲಿ ಸತತ ಜಯ ಕಂಡಿರುವ ಪಂಜಾಬ್ ಪ್ಲೇ ಆಫ್ ಹಂತಕ್ಕೇರುವ ಕನಸನ್ನು ಜೀವಂತವಾಗಿರಿಸಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ