ಐಪಿಎಲ್ 13: ರಾಜಸ್ಥಾನ್, ಮುಂಬೈಗೆ ಗೆಲುವಿನ ಮಾಲೆ
ಎರಡನೆಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 5 ವಿಕೆಟ್ ಗಳ ಗೆಲುವು ಕಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಶಿಖರ್ ಧವನ್ ಅಜೇಯ 69 ರನ್ ಗಳಿಸಿದರು. ಇದಕ್ಕೆ ಉತ್ತರವಾಗಿ ಮುಂಬೈ 19.4 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 166 ರನ್ ಗಳಿಸುವ ಮೂಲಕ ಗೆಲುವು ದಾಖಲಿಸಿತು.