Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Sampriya

ಬುಧವಾರ, 4 ಜೂನ್ 2025 (20:31 IST)
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಸಂಭವಿಸಿದ ಭೀಕರ ಕಾಲ್ತುಳಿತ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಆರ್‌ಸಿಬಿ ತಂಡದ ವಿಜಯೋತ್ಸವದ ವೇಳೆ ನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿರೆ, 50ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. 

ಈ ಕುರಿತು ಪ್ರಧಾನಿ ಕಾರ್ಯಾಲಯ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಈ ದುರಂತದ ಸಮಯದಲ್ಲಿ, ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬಗಳ ದುಃಖದಲ್ಲಿ ಭಾಗಿಯಾಗುತ್ತೇನೆ. ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡವು ಮಂಗಳವಾರ ಪಂಜಾಬ್‌ ಕಿಂಗ್ಸ್‌ ತಂಡವನ್ನು ಐಪಿಎಲ್‌ ಫೈನಲ್‌ನಲ್ಲಿ ಆರು ವಿಕೆಟ್‌ಗಳಿಂದ ಮಣಿಸಿತ್ತು. ಈ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ