ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಹ್ಯಾಟ್ರಿಕ್‌ ಜಯ: ಪ್ಲೇ ಆಫ್ ಕನಸು ಜೀವಂತ

Sampriya

ಭಾನುವಾರ, 5 ಮೇ 2024 (10:06 IST)
ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ರೋಚಕ ಐಪಿಎಲ್ 2024 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಗುಜರಾತ್ ಟೈಟನ್ಸ್ ವಿರುದ್ಧ ನಾಲ್ಕು ವಿಕೇಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಆರ್‌ಸಿಬಿ ಮೊದಲು ಬೌಲಿಂಗ್ ಆಯ್ಕೆ ಮಾಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡದ ಪರ ಶಾರುಖ್ ಖಾನ್ 37 ರನ್, ರಾಹುಲ್ ತೆವಾಟಿಯಾ 35 ರನ್ ಮತ್ತು ಡೇವಿಡ್ ಮಿಲ್ನರ್ 30 ರನ್ ಗಳಿಸಿದರು. ಇದರಿಂದಾಗಿ ಗುಜರಾತ್ 19.3 ಓವರ್‌ಗಳಲ್ಲಿ 147 ರನ್ ಗಳಿಸಿ ಆಲೌಟ್‌ ಆಯಿತು.

ಗುರಿ ಬೆನ್ನತ್ತಿದ ಆರ್‌ಸಿಬಿ ಇನ್ನೂ 38 ಎಸೆತಗಳು ಬಾಕಿ ಇರುವಂತೆಯೇ 13. 4 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 152 ರನ್ ಬಾರಿಸಿ ಗೆಲವು ಪಡೆಯಿತು. ಇದರೊಂದಿಗೆ ಆರ್‌ಸಿಬಿಯ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಆದರೆ, ಬೇರೆ ತಂಡಗಳ ಸೋಲು ಗೆಲುವಿನ ಲೆಕ್ಕಾಚಾರದಲ್ಲಿ ಆರ್‌ಸಿಬಿಯ ಪ್ಲೇ ಆಫ್ ಕನಸು ನಿಂತಿದೆ.

ಆರ್ ಸಿಬಿ ಈ ಗೆಲುವಿನೊಂದಿಗೆ ಆಡಿರುವ 11 ಪಂದ್ಯಗಳಲ್ಲಿ ನಾಲ್ಕು ಗೆಲುವಿನೊಂದಿಗೆ ಒಟ್ಟಾರೆ 8 ಅಂಕಗಳನ್ನು ಗಳಿಸಿದೆ. ಅಂಕಪಟ್ಟಿಯಲ್ಲಿ ಕೊನೇ ಸ್ಥಾನದಿಂದ 7ನೇ ಸ್ಥಾನಕ್ಕೆ ಜಿಗಿದಿದೆ.

ಆರ್‌ಸಿಬಿ ಪರ ಫಾಫ್​ ಡು ಪ್ಲೆಸಿಸ್​ 23 ಎಸೆತಕ್ಕೆ 63 ರನ್ ಬಾರಿಸಿದರು. ಕೇವಲ 3.1 ಓವರ್​ಗಳಲ್ಲಿ 50 ರನ್ ಗಡಿ ದಾಟಿಸಿದ ವಿರಾಟ್ ಕೊಹ್ಲಿ ಮತ್ತು ಫಾಪ್​ ಆರ್‌ಸಿಬಿ ಗೆಲುವಿಗೆ ನೆರವಾದರು.

ಆರ್‌ಸಿಬಿ ಪರ ಮೊಹಮ್ಮದ್ ಸಿರಾಜ್, ಯಶ್ ದಯಾಳ್ ಮತ್ತು ವೈಶಾಖ ವಿಜಯಕುಮಾರ್‌ ತಲಾ ಎರಡು ವಿಕೆಟ್ ಪಡೆದರೆ, ಕ್ಯಾಮರೂನ್ ಗ್ರೀನ್ ಮತ್ತು ಕರ್ಣ್ ಶರ್ಮಾ ತಲಾ ಒಂದು ವಿಕೆಟ್ ಪಡೆದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ