ದುಬೈ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಕೋಲ್ಕೊತ್ತಾ ನೈಟ್ ರೈಡರ್ಸ್ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 171 ರನ್ ಪೇರಿಸಿದೆ.
ಆರಂಭಿಕ ಶುಬ್ನಂ ಗಿಲ್ ಕೇವಲ 1 ರನ್ ಗೆ ವಿಕೆಟ್ ಒಪ್ಪಿಸಿದರೆ ವೆಂಕಟೇಶ್ ಐಯರ್ 18 ರನ್ ಗೆ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ತ್ರಿಪಾಟಿ 45 ರನ್ ಗಳಿಸಿ ತಂಡಕ್ಕೆ ಆಸರೆಯಾದರು. ಆದರೆ ಇವರಿಂದ ದೊಡ್ಡ ಮೊತ್ತದತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.
ಈ ವೇಳೆ ಕೆಳ ಕ್ರಮಾಂಕದಲ್ಲಿ ನಿತೀಶ್ ರಾಣಾ ಅಜೇಯ 37 ರನ್ ಗಳಿಸಿ ತಂಡಕ್ಕೆ ಉತ್ತಮ ಮೊತ್ತ ಕಟ್ಟಿಕೊಟ್ಟರು. ಆಂಡ್ರೆ ರಸೆಲ್ ರದ್ದು 20 ರನ್ ಗಳ ಕೊಡುಗೆ. ಸಿಎಸ್ ಕೆ ಪರ ಜೋಶ್ ಹೇಝಲ್ ವುಡ್, ಶ್ರಾದ್ಧೂಲ್ ಠಾಕೂರ್ ತಲಾ 2 ವಿಕೆಟ್ ಕಬಳಿಸಿದರು.