ಐಪಿಎಲ್ 14: ಮುಂಬೈ ಇಂಡಿಯನ್ಸ್ ಗೆ ಹೈದರಾಬಾದ್ ಸವಾಲು

ಶನಿವಾರ, 17 ಏಪ್ರಿಲ್ 2021 (09:22 IST)
ಚೆನ್ನೈ: ಐಪಿಎಲ್ 14 ರ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಲಿದೆ.


ಸನ್ ರೈಸರ್ಸ್ ಹೈದರಾಬಾದ್ ಕಳೆದ ಪಂದ್ಯವನ್ನು ಪಂಜಾಬ್ ವಿರುದ್ಧ ಕೂದಲೆಳೆಯಲ್ಲಿ ಸೋತಿತ್ತು. ಇದುವರೆಗೆ ಆಡಿದ ಎರಡೂ ಪಂದ್ಯಗಳನ್ನು ಸೋತಿರುವ ಹೈದರಾಬಾದ್ ಗೆ ಈಗ ಗೆಲುವು ಅನಿವಾರ್ಯವಾಗಿದೆ.

ಅತ್ತ ಮುಂಬೈ ಇಂಡಿಯನ್ಸ್ ಆಡಿದ ಎರಡು ಪಂದ್ಯಗಳ ಪೈಕಿ ಒಂದು ಸೋಲು, ಒಂದು ಗೆಲುವು ಕಂಡಿದ್ದು, ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈ ಪಂದ್ಯವನ್ನು ಗೆದ್ದು ಮತ್ತೆ ಐಪಿಎಲ್ ನಲ್ಲಿ ತನ್ನ ಪ್ರಾಬಲ್ಯ ಮುಂದುವರಿಸುವ ಉತ್ಸಾಹದಲ್ಲಿ ಮುಂಬೈ ಇದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ