ಮೊದಲು ಬ್ಯಾಟಿಂಗ್ ಮಾಡಿದ ನಿಗದಿತ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿತು. ಮೊದಲಾರ್ಧದಲ್ಲಿ ಗ್ಲೆನ್ ಮ್ಯಾಕ್ಸ್ ವೆಲ್ 49 ಎಸೆತಗಳಲ್ಲಿ 78 ರನ್ ಸಿಡಿಸಿ ಅಬ್ಬರಿಸಿದರು. ದ್ವಿತಿಯಾರ್ಧದಲ್ಲಿ ಎಬಿಡಿ ವಿಲಿಯರ್ಸ್ ಸಿಡಿಲಬ್ಬರ. ಕೇವಲ 34 ಎಸೆತಗಳಲ್ಲಿ 76 ರನ್ ಸಿಡಿಸಿದ ಎಬಿಡಿ ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಆರ್ ಸಿಬಿ 38 ರನ್ ಗಳಿಂದ ಗೆಲುವು ಕಂಡಿತು.
ನಿನ್ನೆಯ ಇನ್ನೊಂದು ಪಂದ್ಯದಲ್ಲಿ ಕಿಂಗ್ಸ್ ಪಂಜಾಬ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ 6 ವಿಕೆಟ್ ಗಳ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ಕನ್ನಡಿಗರಾ ಮಯಾಂಕ್ ಅಗರ್ವಾಲ್ 69, ಕೆಎಲ್ ರಾಹುಲ್ 61 ರನ್ ಗಳಿಸಿದರು. ಈ ಮೊತ್ತ ಬೆನ್ನತ್ತಿದ ಡೆಲ್ಲಿಗೆ 92 ರನ್ ಗಳಿಸಿದ ಶಿಖರ್ ಧವನ್ ಆಸರೆಯಾದರು. ಅಂತಿಮವಾಗಿ ಡೆಲ್ಲಿ 18.2 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು ಗುರಿಮುಟ್ಟಿತು.