ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಆರಂಭಿಕರಾದ ಶಿಖರ್ ಧವನ್ 43, ಪೃಥ್ವಿ ಶಾ 48 ರನ್ ಗಳಿಸಿ ಉತ್ತಮ ಆರಂಭ ಒದಗಿಸಿದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ರಿಷಬ್ ಪಂತ್ ಕೇವಲ 10, ಶ್ರೇಯಸ್ ಐಯರ್ 18 ರನ್ ಗಳಿಸಿ ಔಟಾಗಿದ್ದರಿಂದ ಡೆಲ್ಲಿಗೆ ನಿರೀಕ್ಷಿತ ರನ್ ಬರಲಿಲ್ಲ. ಆರ್ ಸಿಬಿ ಪರ ಮೊಹಮ್ಮದ್ ಸಿರಾಜ್ 2 ವಿಕೆಟ್ ಕಬಳಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆರ್ ಸಿಬಿ 6 ರನ್ ಗಳಿಸುವಷ್ಟರಲ್ಲಿ ನಾಯಕ ಕೊಹ್ಲಿ (4), ದೇವದತ್ತ್ ಪಡಿಕ್ಕಲ್ (0) ರನ್ನು ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಆದರೆ ಈ ವೇಳೆ ಶ್ರೀಕರ ಭರತ್ 52 ಎಸೆತಗಳಿಂದ ಅಜೇಯ 78 ರನ್ ಗಳಿಸಿ ತಂಡಕ್ಕೆ ಗೆಲುವು ಕೊಡಿಸಿದರು. 33 ಎಸೆತಗಳಲ್ಲಿ 51 ರನ್ ಗಳಿಸಿ ಗ್ಲೆನ್ ಮ್ಯಾಕ್ಸ್ ವೆಲ್ ಉತ್ತಮ ಸಾಥ್ ನೀಡಿದರು. ಅಂತಿಮ ಎಸೆತವನ್ನು ಸಿಕ್ಸರ್ ಗಟ್ಟಿದ ಭರತ್ ಗೆಲುವು ಕೊಡಿಸಿದರು. ಅಂತಿಮವಾಗಿ ಆರ್ ಸಿಬಿ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು.