ಐಪಿಎಲ್ 2022: ಸನ್ ರೈಸರ್ಸ್ ಹೈದರಾಬಾದ್-ಗುಜರಾತ್ ನಡುವೆ ಇಂದಿನ ಪಂದ್ಯ

ಸೋಮವಾರ, 11 ಏಪ್ರಿಲ್ 2022 (09:40 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಮತ್ತು ಗುಜರಾತ್ ಟೈಟಾನ್ಸ್ ನಡುವೆ ಪಂದ್ಯ ನಡೆಯಲಿದೆ.

ಈ ಟೂರ್ನಿಯಲ್ಲಿ ಗುಜರಾತ್ ಹೊಸ ತಂಡವಾದರೂ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಸೋಲಿಲ್ಲದ ಸರದಾರನಂತೆ ಮೆರೆಯುತ್ತಿದೆ. ಇದೀಗ ಅದೇ ಆತ್ಮವಿಶ್ವಾಸದಲ್ಲಿ ಹೈದರಾಬಾದ್ ತಂಡವನ್ನು ಎದುರಿಸಲಿದೆ.

ಇನ್ನೊಂದೆಡೆ ಹೈದರಾಬಾದ್ ಕೂಡಾ ಆರಂಭಿಕ ಪಂದ್ಯಗಳಲ್ಲಿ ಎಡವಿದರೂ ಕಳೆದ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗೆದ್ದ ಪರಿ ಅದರ ಆತ್ಮವಿಶ್ವಾಸ ಹೆಚ್ಚಿಸಿದೆ. ಹೀಗಾಗಿ ಇಂದಿನ ಪಂದ್ಯದ ಮೇಲೆ ಕುತೂಹಲ ಹೆಚ್ಚಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ