ಐಪಿಎಲ್ 2022: ಹೈದರಾಬಾದ್ ಗೆ ಕೆಕೆಆರ್ ಎದುರಾಳಿ

ಶುಕ್ರವಾರ, 15 ಏಪ್ರಿಲ್ 2022 (08:46 IST)
ಮುಂಬೈ: ಐಪಿಎಲ್ 2022 ರಲ್ಲಿ ಇಂದು ಸನ್ ರೈಸರ್ಸ್ ಹೈದರಾಬಾದ್ ಗೆ ಕೋಲ್ಕೊತ್ತಾ ನೈಟ್ ರೈಡರ್ಸ್ ಎದುರಾಳಿಯಾಗಿದೆ.

ಹಿಂದಿನ ಪಂದ್ಯದಲ್ಲಿ ಕೆಕೆಆರ್ ಡೆಲ್ಲಿ ವಿರುದ್ಧ ಸೋಲು ಅನುಭವಿಸಿತ್ತು. ಹಾಗಿದ್ದರೂ ಒಟ್ಟಾರೆಯಾಗಿ ನೋಡುವುದಾದರೆ ಈ ಐಪಿಎಲ್ ನಲ್ಲಿ ಕೋಲ್ಕೊತ್ತಾ ಪ್ರದರ್ಶನ ಅತ್ಯುತ್ತಮವಾಗಿಯೇ ಇದೆ.

ಇನ್ನೊಂದೆಡೆ ಸನ್ ರೈಸರ್ಸ್ ಹೈದರಾಬಾದ್ ಆರಂಭಿಕ ಪಂದ್ಯದಲ್ಲಿ ಎಡವಿದರೂ ಕಳೆದೆರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು ಆತ್ಮವಿಶ್ವಾಸದಲ್ಲಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉತ್ತಮ ಹೋರಾಟ ನಿರೀಕ್ಷಿಸಬಹುದು. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ