ಐಪಿಎಲ್ 2022: ರಾಹುಲ್ ದಾಖಲೆಯ ಶತಕದ ಮುಂದೆ ಸೋತ ಮುಂಬೈ
ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಕೆಎಲ್ ರಾಹುಲ್ ಅಜೇಯ 103 ರನ್ ಗಳಿಸಿದರು. ಈ ಮೂಲಕ ಮುಂಬೈ ಇಂಡಿಯನ್ಸ್ ವಿರುದ್ಧ ಅವರು ದಾಖಲೆಯ ಮೂರನೇ ಶತಕ ಸಿಡಿಸಿದರು. ಅವರಿಗೆ ಸಾಥ್ ನೀಡಿದ ಮನೀಶ್ ಪಾಂಡೆ 22 ರನ್ ಗಳಿಸಿದರು.
ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಯಿತು. ರೋಹಿತ್ ಶರ್ಮಾ 39 ರನ್, ತಿಲಕ್ ವರ್ಮ 38 ರನ್ ಗಳಿಸಿದರು. ಮತ್ತೆ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ ಮುಂಬೈ ಸತತ 8 ನೇ ಸೋಲುಂಡಿತು.