ಐಪಿಎಲ್ 2022: ಲಕ್ನೋ ಸೂಪರ್ ಜೈಂಟ್ಸ್ ಗೆ ಗೆಲುವಿನ ಸಿಹಿ

ಶುಕ್ರವಾರ, 8 ಏಪ್ರಿಲ್ 2022 (08:40 IST)
ಮುಂಬೈ: ಐಪಿಎಲ್ 2022 ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಿಷಬ್ ಪಂತ್ ಪಡೆ 20 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 149 ರನ್ ಗಳಿಸಿತು. ಡೆಲ್ಲಿ ಪರ ಪೃಥ್ವಿ ಆ 61, ರಿಷಬ್ ಪಂತ್ ಅಜೇಯ 39, ಸರ್ಫರಾಜ್ ಖಾನ್ ಅಜೇಯ 36 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಲಕ್ನೋ ಪರ ನಾಯಕ ಕೆಎಲ್ ರಾಹುಲ್ 24, ಕ್ವಿಂಟನ್ ಡಿ ಕಾಕ್ 80 ರನ್ ಗಳಿಸಿ ಭರ್ಜರಿ ಆರಂಭ ಒದಗಿಸಿದರು. ಅಂತಿಮವಾಗಿ ಲಕ್ನೋ 19.4 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 155 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ