ಐಪಿಎಲ್ 2022: ಮುಂಬೈಗೆ ಮೊದಲ ಗೆಲುವಿನ ಸಂಭ್ರಮ

ಭಾನುವಾರ, 1 ಮೇ 2022 (08:10 IST)
ಮುಂಬೈ: ಐಪಿಎಲ್ 2022 ರಲ್ಲಿ ಮುಂಬೈ ಇಂಡಿಯನ್ಸ್ ಕೊನೆಗೂ ಗೆಲುವಿನ ನಗೆ ಬೀರಿದೆ. ರಾಜಸ್ಥಾನ್ ರಾಯಲ್ಸ್ ತಂಡದ ವಿರುದ್ಧದ ಪಂದ್ಯವನ್ನು 5 ವಿಕೆಟ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿತು. ಜೋಸ್ ಬಟ್ಲರ್ 67, ಆರ್ ಅಶ್ವಿನ್ 21 ರನ್ ಗಳಿಸಿದರು.

ಈ ಸಾಧಾರಣ ಮೊತ್ತ ಬೆನ್ನತ್ತಿದ ಮುಂಬೈ 19.2 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 161 ರನ್ ಗಳಿಸುವ ಮೂಲಕ ಗೆಲುವು ಕಂಡಿತು. ಸೂರ್ಯಕುಮಾರ್ ಯಾದವ್ 51, ಇಶಾನ್ ಕಿಶನ್ 26, ತಿಲಕ್ ವರ್ಮ 35, ಟಿಮ್ ಡೇವಿಡ್ 20 ರನ್ ಗಳಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ