ಐಪಿಎಲ್ 2022: ಗುಜರಾತ್ ಗೆ ಮೊದಲ ಸೋಲುಣಿಸಿದ ಹೈದರಾಬಾದ್

ಮಂಗಳವಾರ, 12 ಏಪ್ರಿಲ್ 2022 (08:50 IST)
ಮುಂಬೈ: ಐಪಿಎಲ್ 2022 ರಲ್ಲಿ ಸೋಲಿಲ್ಲದ ಸರದಾರನಂತೆ ಮುನ್ನುಗ್ಗುತ್ತಿದ್ದ ಗುಜರಾತ್ ಟೈಟನ್ಸ್ ಗೆ ಸನ್ ರೈಸರ್ಸ್ ಹೈದರಾಬಾದ್ ಮೊದಲ ಸೋಲುಣಿಸಿದೆ. ನಿನ್ನೆಯ ಪಂದ್ಯದಲ್ಲಿ 8 ವಿಕೆಟ್ ಗಳ ಹೀನಾಯ ಸೋಲು ಕಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತು. ಹಾರ್ದಿಕ್ ಪಾಂಡ್ಯ ಅಜೇಯ 50 ರನ್ ಸಿಡಿಸಿದರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಹೈದರಾಬಾದ್ 19.1 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು. ಆರಂಭಿಕರಾದ ಅಭಿಷೇಕ್ ಶರ್ಮಾ 42, ಕೇನ್ ವಿಲಿಯಮ್ಸನ್ 57 ರನ್ ಗಳಿಸಿದರು. ಕೊನೆಯಲ್ಲಿ ಸಿಡಿದ ನಿಕಲಸ್ ಪೂರನ್ 18 ಎಸೆತಗಳಲ್ಲಿ 35 ರನ್ ಸಿಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ