ಲಖನೌ: ಪ್ಲೇ ಆಫ್‌ಗೆ ಟಿಕೆಟ್ ಪಡೆಯಲು ಗೆಲ್ಲಲೇಬೇಕಿದ್ದ ಪಂದ್ಯವನ್ನು ಆರು ವಿಕೆಟ್‌ಗಳಿಂದ ಸೋತ ಲಖನೌ ಸೂಪರ್ ಜೈಂಟ್ಸ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ.
ಗುಜರಾತ್ ಟೈಟನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಈಗಾಗಲೇ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿವೆ. ಉಳಿದಿರುವ ಒಂದು ಸ್ಥಾನದ ರೇಸ್‌ನಲ್ಲಿ ಲಖನೌ ಹೊರಬಿದ್ದ ಕಾರಣ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ.
ಸೋಮವಾರ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಲಖನೌ ಸೂಪರ್ ಜೈಂಟ್ಸ್(ಎಲ್‌ಎಸ್‌ಜಿ) ತಂಡವು ಆರಂಭಿಕ ಆಟಗಾರರ ಉತ್ತಮ ಪ್ರದರ್ಶನದ ನೆರವಿನಿಂದ 20 ಓವರ್‌ಗಳ ಅಂತ್ಯಕ್ಕೆ 7 ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿದೆ.
ಈ ಗುರಿಯನ್ನು ಬೆನ್ನಟ್ಟಿದ ಹೈದರಾಬಾದ್ ತಂಡವು ಅಭಿಷೇಕ್ ಶರ್ಮಾ (59;20ಎಸೆತ) ಅವರ ಬಿರುಸಿನ ಅರ್ಧಶತಕದ ನೆರವಿನಿಂದ 10 ಎಸೆತ ಇರುವಂತೆ 4 ವಿಕೆಟ್‌ಗೆ 206 ರನ್ ಗಳಿಸಿ ಜಯಿಸಿತು.