ಕಿಂಗ್ ಕೊಹ್ಲಿ ಮಿಂಚು: ಪಂಜಾಬ್ ವಿರುದ್ಧ ಆರ್‌ಸಿಬಿಗೆ ರೋಚಕ ಜಯ
ಸವಾಲಿನ ರನ್ ಬೆನ್ನತ್ತಿದ ಆರ್‌ಸಿಬಿ ತಂಡಕ್ಕೆ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಆಸರೆಯಾದರು. 49 ಎಸೆತಗಳಲ್ಲಿ 77 ರನ್ ಸಿಡಿಸಿದ ಕೊಹ್ಲಿ ಗೆಲುವಿಗೆ ಉಪಯುಕ್ತ ಕಾಣಿಕೆ ನೀಡಿದರು. ಹೀಗಾಗಿ, ಬೆಂಗಳೂರು ತಂಡವು 19.2 ಓವರ್‌ಗಳಲ್ಲಿ 6 ವಿಕೆಟ್‌ಗೆ 178 ರನ್ ಗಳಿಸಿ ಗೆಲುವು ಸಾಧಿಸಿತು.
ಈ ಬಾರಿಯ ಐಪಿಎಲ್‌ನ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡವು ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಮುಗ್ಗರಿಸಿತ್ತು. ಆದರೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಎರಡನೇ ಪಂದ್ಯದಲ್ಲಿ ತವರಿನ ಪ್ರೇಕ್ಷಕರ ಎದುರು ಗೆದ್ದು ಬೀಗಿತು. ಕೊಹ್ಲಿ ಅಭಿಮಾನಿಗಳಿಗೆ ಸಿಕ್ಸರ್ ಮತ್ತು ಬೌಂಡರಿಗಳಿಂದ ರಂಜಿಸಿದರು.